ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಸಂಸದ ಬಿ.ಎನ್.ಬಚ್ಚೇಗೌಡ ರಾಜೀನಾಮೆ ಇಂದು

Published 17 ಮಾರ್ಚ್ 2024, 22:30 IST
Last Updated 17 ಮಾರ್ಚ್ 2024, 22:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಅವರು ಬಿಜೆಪಿಗೆ ಸೋಮವಾರ ರಾಜೀನಾಮೆ ನೀಡಲಿದ್ದಾರೆ. 

ಈ ಕುರಿತು ‍‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ನನಗೆ ವಯಸ್ಸು 80 ವರ್ಷ ದಾಟಿದೆ. ಬೇರೆ ರಾಜಕೀಯ ಪಕ್ಷ ಸೇರುವುದಿಲ್ಲ.  ಚುನಾವಣಾ ರಾಜಕೀಯದಿಂದ ದೂರ ಇರುವೆ. ಆದರೆ ಸಕ್ರಿಯ ರಾಜಕಾರಣದಲ್ಲಿಯೇ ಇರುವೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡುವುದಿಲ್ಲ’ ಎಂದು ಹೇಳಿದರು. 

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. 2023ರ ಆಗಸ್ಟ್‌ನಲ್ಲಿಯೇ ಅವರು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT