ನವದೆಹಲಿ: ಕೇಂದ್ರ ಪ್ರಾಯೋಜಿತ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಅಸಹಕಾರ ತೋರುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಆರೋಪಿಸಿದರು.

ಲೋಕಸಭೆಯಲ್ಲಿ ಮಂಗಳವಾರ ನಡೆದ ಹಣಕಾಸು ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಅವರು, ‘ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಜನ ಸಾಮಾನ್ಯರಿಗೆ ತಲುಪಲು ರಾಜ್ಯ ಸರ್ಕಾರಗಳ ಸಮಯೋಚಿತ ಅನುಷ್ಠಾನ ಕೂಡ ಅತಿ ಮುಖ್ಯ. ಆದರೆ, ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆಯಂತಹ ಮಹತ್ವದ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ಅಸಹಕಾರ, ವಿಳಂಬ ನೀತಿಯಿಂದಾಗಿ ಅನುದಾನ ಸರಿಯಾಗಿ ಬಳಕೆಯಾಗದೆ ಉಳಿದಿದೆ. ಇದರಿಂದ ಬಡ ಕುಟುಂಬಗಳು ಕುಡಿಯುವ ನೀರು ಮತ್ತು ವಸತಿ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ‘ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮತ್ತು ಸೋಮೇಶ್ವರ ಭಾಗದಲ್ಲಿ ಕಡಲ್ಕೊರೆತ ತೀವ್ರವಾಗಿದೆ. ಈ ಸಮಸ್ಯೆಯಿಂದ ಮೀನುಗಾರರ ಮನೆಗಳು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗುತ್ತಿದೆ. ಕೇಂದ್ರ ಪರಿಸರ ಸಚಿವಾಲಯ ಹಾಗೂ ಭೂವಿಜ್ಞಾನ ಸಚಿವಾಲಯವು ಸಮನ್ವಯದಿಂದ ವೈಜ್ಞಾನಿಕ ಸಮಗ್ರ ಕರಾವಳಿ ರಕ್ಷಣಾ ಯೋಜನೆ ರೂಪಿಸಿ, ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ಕೊಂಕಣ ರೈಲ್ವೆಯ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪೂರ್ಣ ಪ್ರಮಾಣದ ಅಭಿವೃದ್ಧಿಗಾಗಿ ತಕ್ಷಣವೇ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ದಕ್ಷಿಣ ಕನ್ನಡದಲ್ಲಿ ಮೂಲಸೌಕರ್ಯ ಮತ್ತು ಸರಕು ಸಾಗಣೆ ವ್ಯವಸ್ಥೆಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಬೇಕು. ಮಂಗಳೂರು-ಬೆಂಗಳೂರು ಎಕ್ಸ್ಪ್ರೆಸ್ವೇ ಕಾರಿಡಾರ್ ಹಾಗೂ ಮಂಗಳೂರು ಬೈಪಾಸ್ ಕಾಮಗಾರಿಗಳಿಗೆ ವೇಗ ನೀಡಬೇಕು. ಶಿರಾಡಿ ಘಾಟ್ ಸುರಂಗ ಮಾರ್ಗ ನಿರ್ಮಾಣದ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.