ಬೆಂಗಳೂರು: ವಿದ್ಯಾರ್ಥಿನಿಯರು ಮೈತುಂಬ ಬಟ್ಟೆ ಹಾಕಿಕೊಳ್ಳಬೇಕು. ಯಾಕೆಂದರೆ ಮಹಿಳೆಯರು ಧರಿಸುವ ಉಡುಪುಗಳನ್ನು ನೋಡಿ ಪುರುಷರು ಉದ್ರೇಕಗೊಳ್ಳುತ್ತಾರೆ. ಅದರಿಂದ ಅತ್ಯಾಚಾರ ಪ್ರಕರಣಗಳೂ ಹೆಚ್ಚಲು ಕಾರಣ ಎಂದು ಹೊನ್ನಾಳಿ ಶಾಸಕ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ 'ಬಿಕಿನಿ ಅಥವಾ ಹಿಜಾಬ್ ಧರಿಸುವುದು ಮಹಿಳೆಯರ ಹಕ್ಕು' ಎಂಬ ಹೇಳಿಕೆಯನ್ನು ವಿರೋಧಿಸಿ ರೇಣುಕಾಚಾರ್ಯ ಅವರು ಕರ್ನಾಟಕ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

'ಅತ್ಯಾಚಾರ ಪ್ರಕರಣಗಳು ಹೆಚ್ಚಲು ಮಹಿಳೆಯರ ಉಡುಪೇ ಕಾರಣ ಎಂಬ ಹೇಳಿಕೆ ನೀಡಿರುವುದು ದುರುದ್ದೇಶದಿಂದ ಅಲ್ಲ. ಈ ಹೇಳಿಕೆಯಿಂದ ಮಹಿಳೆಯರಿಗೆ ನೋವಾಗಿದ್ದಲ್ಲಿ ಕ್ಷಮೆ ಕೋರುವೆ' ಎಂದು ಕೊನೆಗೆ ರೇಣುಕಾಚಾರ್ಯ ಅವರು ಸ್ಪಷ್ಟಪಡಿಸಿದ್ದಾರೆ.

ಮಹಿಳೆಯರು ಮೈತುಂಬ ಬಟ್ಟೆ ಹಾಕಬೇಕು. ಅತ್ಯಾಚಾರ ಪ್ರಕರಣ ಹೆಚ್ಚಳಕ್ಕೆ ಮಹಿಳೆಯರ ಉಡುಪೇ ಕಾರಣ ಎಂಬ ರೇಣುಕಾಚಾರ್ಯ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಬಿಕಿನಿ ಪದ ಬಳಸಿದ ಪ್ರಿಯಾಂಕಾ ಮಹಿಳೆಯರ ಕ್ಷಮೆ ಕೋರಲಿ: ರೇಣುಕಾಚಾರ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.