ಬೆಂಗಳೂರು: ನಾನುಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ. ನಾನು ಯಾರನ್ನೂ ಭೇಟಿ ಮಾಡಿಲ್ಲ.ಡಿ.ಕೆ ಶಿವಕುಮಾರ್ ಅವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿಹೇಳಿದ್ದಾರೆ.

ಸಂಸದರು,ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದಾಗಿ ಅವರ (ಡಿ.ಕೆ ಶಿವಕುಮಾರ್) ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಟ್ವಿಟರ್ ಹ್ಯಾಂಡಲ್‌ನಲ್ಲಿ ಇದಕ್ಕೆ ಸಂಬಂಧಿಸಿದ ಯಾವುದೇ ಟ್ವೀಟ್‌ಗಳಿಲ್ಲ. ಆದರೆ,ಸಂಸದರ ಪೋಸ್ಟ್ಪ್ರಕಾರ ಡಿ.ಕೆ. ಶಿವಕುಮಾರ್ ಅವರು ತಮ್ಮ ಟ್ವಿಟರ್ ಪುಟದಲ್ಲಿ, ʼನನ್ನ ನಿವಾಸದಲ್ಲಿ ಲೋಕಸಭಾ ಸದಸ್ಯರಾದ ಶ್ರೀ ಕರಡಿ ಸಂಗಣ್ಣ ಅಮರಪ್ಪ, ಶಾಸಕರಾದ ಶ್ರೀ ಬಸನಗೌಡ ದದ್ದಲ್, ಶಾಸಕರಾದ ಶ್ರೀ ಪಿ.ಟಿ. ಪರಮೇಶ್ವರ್ ನಾಯಕ್, ವಿಧಾನ ಪರಿಷತ್ ಸದಸ್ಯ ಶ್ರೀ ಎಸ್‌ಎಲ್ ಘೋಟ್ನೇಕರ್, ಮಾಜಿ ಮಂತ್ರಿಗಳಾದ ಶ್ರೀ ಮಲ್ಲಿಕಾರ್ಜುನ್ ನಾಗಪ್ಪ ಅವರನ್ನು ಭೇಟಿ ಮಾಡಿ, ಬೇರುಮಟ್ಟದಿಂದ ಪಕ್ಷ ಬಲಗೊಳಿಸುವ ಬಗ್ಗೆ ಚರ್ಚೆ ನಡೆಸಿದೆವುʼ ಎಂದು ಬರೆದುಕೊಂಡಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.