ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಮಂಡ್ಯ ಟಿಕೆಟ್‌ಗಾಗಿ ಸುಮಲತಾ ಕೊನೆಯ ಪ್ರಯತ್ನ

Published 18 ಮಾರ್ಚ್ 2024, 16:31 IST
Last Updated 18 ಮಾರ್ಚ್ 2024, 16:31 IST
ಅಕ್ಷರ ಗಾತ್ರ

ನವದೆಹಲಿ: ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸೋಮವಾರ ಇಲ್ಲಿ ಭೇಟಿ ಮಾಡಿ ಚರ್ಚಿಸಿದರು. ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಮತ್ತೊಮ್ಮೆ ಮನವಿ ಮಾಡಿದರು.

ಮಂಡ್ಯವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಈಗಾಗಲೇ ತೀರ್ಮಾನಿಸಿದೆ. ಹೀಗಾಗಿ, ಕ್ಷೇತ್ರವನ್ನು ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸುಮಲತಾ ಅವರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಕೊನೆಯ ಪ್ರಯತ್ನ ಮಾಡಿದರು. ಮಂಡ್ಯದಲ್ಲಿ ಸುಮಲತಾ ಅವರನ್ನು ಹುರಿಯಾಳುವನ್ನಾಗಿ ಮಾಡುವ ಬಗ್ಗೆ ನಡ್ಡಾ ಯಾವುದೇ ಭರವಸೆ ನೀಡಲಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸುಮಲತಾ ಮಂಗಳವಾರ ಭೇಟಿ ಮಾಡಲಿದ್ದಾರೆ. ಬಳಿಕ ಮಂಡ್ಯದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಡ್ಡಾ ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಜೆಡಿಎಸ್‌ ಜತೆಗಿನ ಮೈತ್ರಿ ಬಗ್ಗೆ ಅಂತಿಮ ತೀರ್ಮಾನ ಇನ್ನೂ ಆಗಿಲ್ಲ ಎಂದು ತಿಳಿಸಿದ್ದಾರೆ. ಮೈತ್ರಿಯ ಅಂತಿಮ ಸಭೆ ಬಳಿಕ ವಿಷಯ ತಿಳಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದರು. 

ಮಂಡ್ಯ ಕ್ಷೇತ್ರ ಸವಾಲಿನ ಕ್ಷೇತ್ರವಾಗಿತ್ತು. ಹಾಗಾಗಿ, ಅದನ್ನು ಬಿಟ್ಟುಕೊಡಲು ಒಪ್ಪಿಲ್ಲ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಬೇಕು ಎಂಬುದು ನನ್ನ ಆಶಯ. ಆಗ ಬಿಜೆಪಿಯ ಸಂಘಟನೆ ಇನ್ನಷ್ಟು ಬಲಗೊಳ್ಳಲಿದೆ. ನಾನೇ ಅಭ್ಯರ್ಥಿಯಾಗಬಹುದು ಎಂಬ ನಿರೀಕ್ಷೆ ಇದೆ’ ಎಂದರು. 

ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯುವ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರ ಬದಲಾವಣೆ ಕುರಿತ ಸುದ್ದಿಗಳು ನಿಜವಲ್ಲ. ಅಂಬರೀಷ್‌ ಅಭಿಮಾನಿಗಳ ಒತ್ತಾಯದ ಮೇರೆಗೆ ಕಳೆದ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ಅಭಿಮಾನಿಗಳ ಸಲಹೆ ಮೇರೆಗೆ ಬಿಜೆಪಿಗೆ ಬಾಹ್ಯ ಬೆಂಬಲ ನೀಡಿದ್ದೇನೆ. ಬಿಜೆಪಿ ಸೇರುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತೇನೆ’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT