ಬೆಂಗಳೂರು: ‘ನಾಡು, ನುಡಿ, ಜಲದ ವಿಚಾರದಲ್ಲಿ ಬದ್ಧತೆ ಇಲ್ಲದ ನಮ್ಮ ರಾಜ್ಯದ ಸಂಸದರು ರಾಜೀನಾಮೆ ನೀಡಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ನಾರಾಯಣಗೌಡ ಆಗ್ರಹಿಸಿದರು.
‘ಕಾವೇರಿ ನೀರು ವಿಚಾರದಲ್ಲಿ ತಮಿಳುನಾಡಿನ ಸಂಸದರು ಒಗ್ಗಟ್ಟಾಗಿದ್ದಾರೆ. ಎಲ್ಲದ್ದಕ್ಕೂ ಸಿದ್ಧರಾಗಿದ್ದಾರೆ. ಆದರೆ, ನಮ್ಮ ಸಂಸದರು ಅಧಿಕಾರಕ್ಕೆ ಅಂಟಿಕೊಂಡಿದ್ದಾರೆ. ನಾಡುನುಡಿ ವಿಚಾರದಲ್ಲಿ ಅಂಬರೀಶ್ ಅವರನ್ನು ಸ್ಮರಿಸಿಕೊಳ್ಳಬೇಕು. ಕಾವೇರಿಗಾಗಿ ಅವರು ಕೇಂದ್ರ ಸಚಿವ ಸ್ಥಾನಕ್ಕೇ ರಾಜೀನಾಮೆ ನೀಡಿದ್ದರು’ ಎಂದರು.
‘ಕನ್ನಡಪರ ಹೋರಾಟಗಾರರು ರಾಜ್ಯದ ಸಂಸದರ ಮನೆಗಳಿಗೆ ಮುತ್ತಿಗೆ ಹಾಕುವ ಮುನ್ನ ಅವರು ರಾಜೀನಾಮೆ ನೀಡಲಿ’ ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.