ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್) ವಿಸ್ತರಣೆಗಾಗಿ ಜಮೀನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ರೈತರು ಸೋಮವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳೂರಿನ ಹೊರವಲಯದ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮಗಳಲ್ಲಿ 1,011 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆವಿರೋಧಿಸಿ, ಕರಾವಳಿ ಕರ್ನಾಟಕ ಜನಾಭಿವೃದ್ಧಿ ವೇದಿಕೆ ಮತ್ತು ಕೃಷಿ ಭೂಮಿ ಸಂರಕ್ಷಣಾ ವೇದಿಕೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಒತ್ತಾಯಿಸಿಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಜಮೀನು ದರ ನಿಗದಿ ಸಭೆಗೆ ನುಗ್ಗಲು ಮುಂದಾದರು.

ಪ್ರತಿಭಟನಾ ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, 'ಪ್ರಕರಣ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ಆದೇಶದಂತೆ ಮುಂದುವರಿಯಲಾಗುವುದು. ನ್ಯಾಯಾಲಯದ ಸೂಚನೆಯಂತೆ ಸಭೆ ನಡೆಸಲಾಗುತ್ತಿದೆ' ಎಂದರು.

ವಿವಾದ ಇತ್ಯರ್ಥಪಡಿಸಲು ಶೀಘ್ರವಾಗಿ ಎಂಆರ್‌ಪಿಎಲ್, ಕೆಐಎಡಿಬಿ ಅಧಿಕಾರಿಗಳು ಮತ್ತು ರೈತರ ಜೊತೆ ಸಭೆ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.