ಬೆಂಗಳೂರು: ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ-ಕಾಮರ್ಸ್ ಪೋರ್ಟಲ್ ತೆರೆಯಲು ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ತಯಾರಿ ನಡೆಸಿದೆ.

ಕೇಂದ್ರ ಸರ್ಕಾರದ ಜೆಮ್ ಪೋರ್ಟಲ್ ಮಾದರಿಯಲ್ಲಿ ರಾಜ್ಯ ಸರ್ಕಾರಿ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ.

ಈ ಸಂಬಂಧ ಎಂಎಸ್ಐಎಲ್ನ ಹಿರಿಯ ಅಧಿಕಾರಿಗಳ ಜೊತೆ ಶನಿವಾರ ಚರ್ಚೆ ನಡೆಸಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಇ-ಕಾಮರ್ಸ್ ಪೋರ್ಟಲ್ ತೆರೆಯಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

‘ಇ-ಕಾಮರ್ಸ್ ಪೋರ್ಟಲ್ ಕಾರ್ಯಾಚರಣೆಯನ್ನು ನಾಲ್ಕು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದು ಕಾರ್ಯರೂಪಕ್ಕೆ ಬಂದರೆ ಸರ್ಕಾರಿ ಇಲಾಖೆಗಳು ತಮಗೆ ಬೇಕಾಗುವ ಸಾಮಗ್ರಿಗಳನ್ನು ಯಾವುದೇ ಟೆಂಡರ್ ಇಲ್ಲದೆ ಇದರ ಮೂಲಕ ಖರೀದಿಸಬಹುದು. ಹಾಗೆಯೇ, ಮಾರಾಟ ಕೂಡ ಮಾಡಬಹುದು. ಕೇಂದ್ರ ಸರ್ಕಾರ ಮಟ್ಟದಲ್ಲಿ ಟೆಂಡರ್ ಇಲ್ಲದೆ ನೇರವಾಗಿ ಖರೀದಿಸಲು ಜೆಮ್ ಪೋರ್ಟಲ್ ಇದೆ. ಅದೇ ಮಾದರಿಯಲ್ಲಿ ಇದು ಕೂಡ ಕೆಲಸ ಮಾಡಲಿದೆ’ ಎಂದು ಸಚಿವರು ವಿವರಿಸಿದರು.

‘ಮೊದಲ ಹಂತದಲ್ಲಿ ಕೇವಲ ಎಂಎಸ್ಐಎಲ್ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು. ಎರಡನೇ ಹಂತದಲ್ಲಿ ಮೈಸೂರು ಸ್ಯಾಂಡಲ್ ಸೋಪು, ಲಿಡ್ಕರ್ ಉತ್ಪನ್ನ, ಮೈಸೂರು ರೇಷ್ಮೆ ಬಟ್ಟೆ, ಕಾವೇರಿ ಎಂಪೋರಿಯಂ ಉತ್ಪನ್ನ, ನಂದಿನಿ ಉತ್ಪನ್ನ ಇತ್ಯಾದಿ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು. ಇದರಲ್ಲಿ ಎಂಎಸ್ಎಂಇ ಉತ್ಪನ್ನಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳು ತಯಾರಿಸುವ ಉತ್ಪನ್ನಗಳಿಗೂ ವೇದಿಕೆ ಕಲ್ಪಿಸಲಾಗುವುದು’ ಎಂದರು.

‘ಮೂರನೇ ಹಂತದಲ್ಲಿ ಗ್ರಾಹಕ ಉತ್ಪನ್ನಗಳು ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳು ಹಾಗೂ ನಾಲ್ಕನೇ ಹಂತದಲ್ಲಿ ತಾಜಾ ಉತ್ಪನ್ನಗಳನ್ನು ಇ-ಕಾಮರ್ಸ್ ಮೂಲಕ ಮಾರಾಟ ಮಾಡುವ ಉದ್ದೇಶ ಇದೆ’ ಎಂದರು

‘ದೇಶದ ಇ-ಕಾಮರ್ಸ್ ವಹಿವಾಟು ಈಗ ವಾರ್ಷಿಕ 75 ಬಿಲಿಯನ್ ಡಾಲರ್ ಇದೆ. 2030ರ ಹೊತ್ತಿಗೆ ಇದು 350 ಬಿಲಿಯನ್ ಡಾಲರ್ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ನಮ್ಮಲ್ಲಿ ಈಗ 900 ಮಿಲಿಯನ್ ಇಂಟರ್ನೆಟ್ ಬಳಕೆದಾರರು ಇದ್ದಾರೆ. ಇವೆಲ್ಲವೂ ಇ-ಕಾಮರ್ಸ್ ಬೆಳವಣಿಗೆಗೆ ಪೂರಕವಾಗಿ ಒದಗಿ ಬರಲಿವೆ’ ಎಂದು ಪಾಟೀಲ ಹೇಳಿದರು.

ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜಕುಮಾರ್, ನಿರ್ದೇಶಕ ಚಂದ್ರಪ್ಪ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.