ಬೆಂಗಳೂರು: 'ಮುಡಾ ಪ್ರಕರಣ ಬಿಜೆಪಿ ಮತ್ತು ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಈ ಪ್ರಕರಣವನ್ನು ಮುಂದಿಟ್ಟು 'ಬಿಜೆಪಿ ಹಾಗೂ ಜೆಡಿಎಸ್ ನವರು ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ಮಾಡಿದಾಗಲೇ, ನಾನು ಏನು ಹೇಳಬೇಕೋ ಹೇಳಿದ್ದೆ. ಇದು ರಾಜಕೀಯ ಪ್ರೇರಿತ ಆರೋಪ. ಯಾವ ದಾಖಲೆಯಲ್ಲೂ ಸಿದ್ದರಾಮಯ್ಯ ಅವರ ಸಹಿ ಇಲ್ಲದಿರುವಾಗ, ಸಂಬಂಧವೇ ಇಲ್ಲದಿರುವಾಗ ಅವರ ಪಾತ್ರ ಹೇಗೆ ಬರುತ್ತದೆ' ಎಂದು ಪ್ರಶ್ನಿಸಿದರು.

'ಆಸ್ತಿ ಕಳೆದುಕೊಂಡವರು ಪರಿಹಾರ ಕೇಳುವುದು ಸಹಜ. ನಾವು ನೀವು ಕೂಡ ಕೇಳುತ್ತೇವೆ. ಅವರು ಕೊಟ್ಟಿದ್ದಾರೆ. ನಮಗೆ ಇಂತಹುದೇ ಜಾಗದಲ್ಲಿ ನಿವೇಶನ ನೀಡಿ ಎಂದು ಅವರು ಎಲ್ಲಿಯೂ ಕೇಳಿಲ್ಲ. ಆದರೂ ಅನಗತ್ಯ ಗೊಂದಲ ಬೇಡ ಎಂದು ಅವರು ಈ ನಿವೇಶನಗಳನ್ನು ವಾಪಸ್ ನೀಡಿದ್ದಾರೆ. ಯಾವುದೇ ಪ್ರಕರಣ ದಾಖಲಿಸುವಾಗ ಅದಕ್ಕೆ ಪೂರಕವಾದ ದಾಖಲೆ ಬೇಕು. ಲೋಕಾಯುಕ್ತ ಸಂಸ್ಥೆ ತನ್ನ ಕರ್ತವ್ಯ ಮಾಡಿದೆ' ಎಂದರು.

'ಬಿಜೆಪಿಯವರು ತಮ್ಮ ಹೋರಾಟ ಮಾಡಿಕೊಳ್ಳಲಿ. ದೆಹಲಿಯಿಂದ ವಕೀಲರನ್ನು ಕರೆಸಿ ವಾದ ಮಂಡಿಸಲು ನಮಗೆ ಗೊತ್ತಿಲ್ಲವೇ?' ಎಂದು ತಿಳಿಸಿದರು.

ಲೋಕಾಯುಕ್ತ ಸಂಸ್ಥೆ ಸರ್ಕಾರದ ತಾಳಕ್ಕೆ ಕುಣಿದಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, 'ಸುಪ್ರೀಂ ಕೋರ್ಟ್ ತೀರ್ಪು ಏನಿದೆ ಗೊತ್ತಿದೆಯೇ? ಸ್ಥಳೀಯ ಮಟ್ಟದ ಯಾವುದೇ ಸಂಸ್ಥೆಗಳನ್ನು ದುರ್ಬಲಗೊಳಿಸಬಾರದು ಎಂಬ ನಿರ್ದೇಶನವಿದೆ. ಇನ್ನು ಹೈಕೋರ್ಟ್ ಕೂಡ ಲೋಕಾಯುಕ್ತ ಸ್ವಾಯತ್ತ ಸಂಸ್ಥೆ ಎಂದು ಹೇಳಿದೆ. ಅವರವರು ಅವರ ಕೆಲಸ ಮಾಡುತ್ತಿದ್ದಾರೆ. ಲೋಕಾಯುಕ್ತ ಪೊಲೀಸರು ಸಿಎಂ ಹೇಳಿದಂತೆ ಕೇಳುತ್ತಾರೆಯೆ? ಇಲ್ಲಿ ಮುಖ್ಯಮಂತ್ರಿ ಹಸ್ತಕ್ಷೇಪವಿಲ್ಲ. ಇಲ್ಲಿ ಯಾವುದೇ ಅಧಿಕಾರಿ ನೇಮಿಸಬೇಕಾದರೂ ಲೋಕಾಯುಕ್ತರ ಅನುಮತಿ ಮೇರೆಗೆ ಕೆಲಸ ಮಾಡಲಾಗುವುದು. ಇಲ್ಲಿ ಕರ್ನಾಟಕದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುವುದೇ ಹೊರತು, ಹೊರ ರಾಜ್ಯದವರನ್ನು ಆಯ್ಕೆ ಮಾಡಲು ಬರುವುದಿಲ್ಲ' ಎಂದು ತಿಳಿಸಿದರು.

'ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ' ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, 'ಅವರಿಗೆ ಬೇರೆ ಸಮಯದಲ್ಲಿ ಉತ್ತರ ನೀಡುತ್ತೇನೆ' ಎಂದರು.
.ಮುಡಾ ಪ್ರಕರಣ | ED ಸಮನ್ಸ್ಗೆ ಹೈಕೋರ್ಟ್ ಮಧ್ಯಂತರ ತಡೆ; ಸಿಎಂ ಪತ್ನಿ ಸದ್ಯ ನಿರಾಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.