ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಹಗರಣ: BSY ಮನೆಗೆ ಮುತ್ತಿಗೆ ಹಾಕಲು ಯತ್ನ, ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

Published 18 ಆಗಸ್ಟ್ 2024, 9:36 IST
Last Updated 18 ಆಗಸ್ಟ್ 2024, 9:36 IST
ಅಕ್ಷರ ಗಾತ್ರ

ಶಿಕಾರಿಪುರ: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಾ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಅವರನ್ನೆಲ್ಲ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು.

ನಂತರ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿರುವ ಅವರ ಮಗ ಬಿ.ವೈ ವಿಜಯೇಂದ್ರ ವಿರುದ್ಧ ದಿಕ್ಕಾರ ಕೂಗುತ್ತಾ, ಯಡಿಯೂರಪ್ಪ ಮನೆಗೆ ನುಗ್ಗಲು ಪ್ರಯತ್ನಿಸಿದವರನ್ನು ವಶಕ್ಕೆ ಪಡೆದ ಪೊಲೀಸರು, ಬಳಿಕ ಬಿಡುಗಡೆಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT