ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರು ಬಿಡುಗಡೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

‘ಜಾರಿ ನಿರ್ದೇಶನಾಲಯದ (ಇ.ಡಿ) ಬಂಧನದಿಂದ ಬಿಡುಗಡೆ ಮಾಡಲು ನಿರ್ದೇಶಿಸಬೇಕು’ ಎಂದು ಕೋರಿ ದಿನೇಶ್ ಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿ ಮಂಗಳವಾರ ಆದೇಶಿಸಿದೆ.

ಮುಡಾದ ಆಯುಕ್ತರಾಗಿದ್ದ ಅವಧಿಯಲ್ಲಿ ಜಿ.ಟಿ.ದಿನೇಶ್ ಕುಮಾರ್ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಅನರ್ಹರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ಪಿಎಂಎಲ್ಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು 2025ರ ಸೆಪ್ಟೆಂಬರ್ 17ರಂದು ಅವರನ್ನು ಬಂಧಿಸಲಾಗಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.