ಮೈಸೂರು: ಮುಡಾದಿಂದ ಅಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಇಲ್ಲಿನ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎ2, ಭಾವಮೈದುನ ಮಲ್ಲಿಕಾರ್ಜುನಸ್ವಾಮಿ ಎ3 ಹಾಗೂ ಜಮೀನಿನ ಮಾಲೀಕ ದೇವರಾಜು ನಾಲ್ಕನೇ ಆರೋಪಿ ಆಗಿದ್ದಾರೆ.