ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ. ದಿನೇಶ್‌ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ಆಗಸ್ಟ್ 31ರಂದೇ ಆದೇಶ ಹೊರಬಿದ್ದಿದ್ದು, ಆ. 28ರಂದು ಅವರನ್ನು ಸರ್ಕಾರವು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವ ಹುದ್ದೆಗೆ ವರ್ಗಾವಣೆ ಮಾಡಿತ್ತು.

‘ಆಯುಕ್ತರ ಮೇಲಿನ ಆರೋಪಗಳ ಕುರಿತು ತಾಂತ್ರಿಕ ಸಮಿತಿಯು ನೀಡಿರುವ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ. ಆದರೆ, ಯಾರ ಅಧ್ಯಕ್ಷತೆಯ ಸಮಿತಿ ವರದಿ ಎಂಬುದನ್ನು ಸ್ಪಷ್ಟಪಡಿಸಿಲ್ಲ.

‘ಮುಡಾ ಸಭೆಗಳಲ್ಲಿ ಪ್ರಸ್ತಾಪಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಮಂಡಿಸದಿರುವುದು, ಸರ್ಕಾರದ ನಿರ್ದೇಶನಗಳ ಉಲ್ಲಂಘನೆ, ವಿನ್ಯಾಸ ನಕ್ಷೆಗಳಿಗೆ ನಿಯಮಬಾಹಿರವಾಗಿ ಅನುಮೋದನೆ, ನಿಯಮ ಮೀರಿ ಭೂಸ್ವಾಧೀನ ಹಾಗೂ ಬದಲಿ ನಿವೇಶನಕ್ಕೆ ಶಿಫಾರಸು, ನಿಯಮ ಮೀರಿ 50:50 ಅನುಪಾತದಲ್ಲಿ ನಿವೇಶನಗಳ ವಿತರಣೆ ಮೊದಲಾದ ಲೋಪಗಳ ಆಧಾರದ ಮೇಲೆ ಅಮಾನತು ಮಾಡಲಾಗಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಈ ಎಲ್ಲ ಲೋಪಗಳ ಕುರಿತು ಟಿ.ವಿ. ಮುರಳಿ ಅಧ್ಯಕ್ಷತೆಯ ಸಮಿತಿಯು 2023ರ ನವೆಂಬರ್‌ನಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಕ್ರಮಕ್ಕೆ ಶಿಫಾರಸು ಮಾಡಿತ್ತು.

ಮುಡಾ ನಿವೇಶನ ಹಂಚಿಕೆ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ, ಹಿಂದಿನ ಆಯುಕ್ತರಾದ ಜಿ.ಟಿ. ದಿನೇಶ್ ಕುಮಾರ್ ಹಾಗೂ ಡಿ.ಬಿ.ನಟೇಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿತ್ತು. ಶಾಸಕ ಟಿ.ಎಸ್. ಶ್ರೀವತ್ಸ ಸೇರಿದಂತೆ ಹಲವರು ಲೋಕಾಯುಕ್ತ ಹಾಗೂ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಆದರೆ ನಟೇಶ್ ಅವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.