ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‍ಪಾದಯಾತ್ರೆ: ಮನವಿ ಪರಿಗಣಿಸಲು ಹೈಕೋರ್ಟ್‌ ಆದೇಶ

Published : 3 ಆಗಸ್ಟ್ 2024, 0:16 IST
Last Updated : 3 ಆಗಸ್ಟ್ 2024, 0:16 IST
ಫಾಲೋ ಮಾಡಿ
Comments

ಬೆಂಗಳೂರು: ‘ರಾಜ್ಯ ಸರ್ಕಾರದ ಬಹುಕೋಟಿ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ಹಗರಣಗಳ ವಿರುದ್ಧ ಕೆಂಗೇರಿಯಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಲು ಅನುಮತಿ ನೀಡುವಂತೆ ಕೋರಿರುವ ಬಿಜೆಪಿಯ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶಿಸಿದೆ.

ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಶುಕ್ರವಾರ ತುರ್ತು ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ ಹೈಕೋರ್ಟ್‌ನ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್, ‘ಅರ್ಜಿದಾರರ ಮನವಿಯನ್ನ ಪರಿಗಣಿಸುವಂತೆ ಆದೇಶಿಸಬೇಕು’ ಎಂದು ಕೋರಿದರು. ಇದಕ್ಕೆ ಸ್ಪಂದಿಸಿದ ನ್ಯಾಯಪೀಠ, ‘ಕೆಂಗೇರಿಯಿಂದ ಮೈಸೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲು ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸಬೇಕು ಹಾಗೂ ಕಾನೂನು ರೀತ್ಯಾ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು’ ಎಂದು ಆದೇಶಿಸಿತು. ವಿಚಾರಣೆಯನ್ನು ಆಗಸ್ಟ್‌ 14ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT