ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರಕ್ಕೇ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ: ಬಿಜೆಪಿ

Published 5 ಜುಲೈ 2024, 23:24 IST
Last Updated 5 ಜುಲೈ 2024, 23:24 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ವಿರುದ್ಧವೇ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದಾರೆ’ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯ ಟೀಕಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆ ಸಂಬಂಧ ಸಿದ್ದರಾಮಯ್ಯ ಅವರು ₹62 ಕೋಟಿ ಪರಿಹಾರ ಕೇಳಿದ ಸಂಬಂಧ ಲಹರ್ ಸಿಂಗ್‌ ಈ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಇಡೀ ದೇಶದಲ್ಲಿ ಯಾವ ಮುಖ್ಯಮಂತ್ರಿಯೂ ತಮ್ಮ ನೇತೃತ್ವದ ಸರ್ಕಾರದ ವಿರುದ್ಧವೇ ಹೀಗೆ ವರ್ತಿಸಿಲ್ಲ. ಇಷ್ಟು ದೊಡ್ಡ ಮೊತ್ತದ ಪರಿಹಾರ ಕೇಳುವುದು ಲಜ್ಜೆಗೆಟ್ಟ ನಡೆಯೂ ಹೌದು’ ಎಂದು ಟೀಕಿಸಿದ್ದಾರೆ.

‘ಸಿದ್ದರಾಮಯ್ಯ ಅವರು ಪರಿಹಾರ ಕೇಳುವ ಮೊದಲು, ನಿವೇಶನಗಳ ಹಂಚಿಕೆ ಕಾನೂನುಬದ್ಧವಾಗಿಯೇ ಆಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕಲ್ಲವೇ? ಸಿದ್ದರಾಮಯ್ಯ ಅಧಿಕಾರದಲ್ಲಿ ಇರಲಿ, ಇಲ್ಲದೇ ಇರಲಿ ಅವರು ಪ್ರಭಾವಿ ಎಂಬುದಂತೂ ನಿಜ. ತಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳುವ ಅವರು, ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹಿಂಜರಿಯಬಾರದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT