ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇ.ಡಿ ಪ್ರಕರಣ | ಸಿಎಂ ಬೆನ್ನಿಗೆ ನಿಂತ ಸಚಿವರು

ಇ.ಡಿ ಪ್ರಕರಣ ಕುರಿತು ಆಪ್ತರೊಂದಿಗೆ ಸಮಾಲೋಚಿಸಿದ ಸಿದ್ದರಾಮಯ್ಯ
Published : 1 ಅಕ್ಟೋಬರ್ 2024, 15:36 IST
Last Updated : 1 ಅಕ್ಟೋಬರ್ 2024, 15:36 IST
ಫಾಲೋ ಮಾಡಿ
Comments

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಕರಣ ದಾಖಲಿಸಿದ ಬೆನ್ನಲ್ಲೇ ಸಂಪುಟ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಸತೀಶ ಜಾರಕಿಹೊಳಿ, ಕೆ.ಎನ್‌. ರಾಜಣ್ಣ, ಎಚ್‌.ಸಿ. ಮಹದೇವಪ್ಪ, ಬಿ.ಜೆಡ್. ಜಮೀರ್‌ ಅಹ್ಮದ್ ಖಾನ್‌, ಕೆ. ವೆಂಕಟೇಶ್‌ ಸೇರಿದಂತೆ ಕೆಲವು ಸಚಿವರು ಹಾಗೂ ಶಾಸಕರು ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿಮಾಡಿ ಚರ್ಚೆ ನಡೆಸಿದರು. ಆಪ್ತ ಸಚಿವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ ಮುಖ್ಯಮಂತ್ರಿಯವರು, ಲೋಕಾಯುಕ್ತ ಪೊಲೀಸರು ಮತ್ತು ಇ.ಡಿ. ದಾಖಲಿಸಿರುವ ಪ್ರಕರಣಗಳನ್ನು ಎದುರಿಸುವ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆ ಪೂರ್ವ ಸಿದ್ಧತಾ ಸಭೆಗೂ ಮೊದಲು ಸಚಿವರು ಮುಖ್ಯಮಂತ್ರಿಯವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಮಾಡಿದರು. ಸಚಿವರೊಂದಿಗೆ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

‘ಲೋಕಾಯುಕ್ತ ಪೊಲೀಸರ ತನಿಖೆ ಮತ್ತು ಇ.ಡಿ. ದಾಖಲಿಸಿರುವ ಪ್ರಕರಣಗಳ ವಿಚಾರದಲ್ಲಿ ಎದೆಗುಂದದಂತೆ ಸಚಿವರು, ಶಾಸಕರು ಸಿದ್ದರಾಮಯ್ಯ ಅವರಿಗೆ ಸಲಹೆ ನೀಡಿದ್ದಾರೆ. ಎರಡೂ ಪ್ರಕರಣಗಳನ್ನು ಕಾನೂನು ಹೋರಾಟದ ಮೂಲಕ ಎದುರಿಸುವಂತೆ ಒತ್ತಾಯಿಸಿದ್ದಾರೆ’ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT