ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈಟ್ನರ್ ಅಡಿಯ ಅಕ್ಷರಗಳಿಗೆ ಟಾರ್ಚ್‌ ಹಾಕಿ ತಡಕಾಡುವುದು CMಗೆ ಶೋಭೆಯಲ್ಲ: HDK

Published : 26 ಆಗಸ್ಟ್ 2024, 11:29 IST
Last Updated : 26 ಆಗಸ್ಟ್ 2024, 11:29 IST
ಫಾಲೋ ಮಾಡಿ
Comments

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬರೆದಿದ್ದ ಪತ್ರದಲ್ಲಿ ವೈಟ್ನರ್‌ ಹಚ್ಚಿದ್ದ ಜಾಗದಲ್ಲಿ ಏನಿತ್ತು ಎನ್ನುವುದರ ಬಗ್ಗೆ ಸಿಎಂ ವಿಡಿಯೊ ಹಂಚಿಕೊಂಡ ಬೆನ್ನಲ್ಲೇ ತಿರುಗೇಟು ನೀಡಿರುವ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ, ‘ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ’ ಎಂದು ಕುಟುಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಮಾನ್ಯ ಸಿದ್ದರಾಮಯ್ಯನವರೇ, ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ಇದು ಮೂಲ ದಾಖಲೆಯಾಗಿದ್ದು ಮುಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮುಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ? ಎಂದಿದ್ದಾರೆ.

‘ನ್ಯಾಯಾಲಯವನ್ನು ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ? ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ.. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT