ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯಪಾಲರ ನಡೆ ವಿರೋಧಿಸಿ ರಾಜಕೀಯ ಹೋರಾಟ, ಕಾನೂನು ಸಮರ: ಡಿ.ಕೆ. ಶಿವಕುಮಾರ್

Published 17 ಆಗಸ್ಟ್ 2024, 8:26 IST
Last Updated 17 ಆಗಸ್ಟ್ 2024, 8:26 IST
ಅಕ್ಷರ ಗಾತ್ರ

ಬೆಂಗಳೂರು: 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ‌‌ ನೀಡಿದ ರಾಜ್ಯಪಾಲರ ನಡೆಯನ್ನು ವಿರೋಧಿಸಿ ನಾವು ರಾಜಕೀಯ ಹೋರಾಟ ಮತ್ತು ಕಾನೂನು ಸಮರಕ್ಕೆ ಸಿದ್ದರಾಗಿದ್ದೇವೆ ' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸಚಿವರ ಸಂಪುಟದ ಸಹೋದ್ಯೋಗಿಗಳ ಜೊತೆ ವಿಧಾನಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಸಂವಿಧಾನ ವಿರೋಧಿ. ರಾಜ್ಯ ಸರ್ಕಾರವನ್ನು ಉರುಳಿಸುವ ನಡೆಸುವ ಹುನ್ನಾರದ ಭಾಗ' ಎಂದು ಆರೋಪಿಸಿದರು.

'ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ನಾವೆಲ್ಲರೂ ಅವರ ಬೆನ್ನಿಗೆ ನಿಲ್ಲುತ್ತೇವೆ' ಎಂದೂ ಹೇಳಿದರು.

'ರಾಜ್ಯಪಾಲರ ಕಚೇರಿಯನ್ನು ಬಿಜೆಪಿಯವರು ದುರ್ಬಳಕೆ ಮಾಡಿಕೊಂಡಿದ್ದಾರೆ‌. ರಾಜಕೀಯ ಷಡ್ಯಂತ್ರವಿದು. ಮುಖ್ಯಮಂತ್ರಿ ತಪ್ಪು ಮಾಡದಿದ್ದರೂ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ' ಎಂದೂ ದೂರಿದರು.

ಮುಖ್ಯಮಂತ್ರಿ ಮೇಲೆ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಕಾನೂನು ಬಾಹಿರ ಎಂದು ಕೃಷ್ಣ ಬೈರೇಗೌಡ ಹೇಳಿದರು.

'ಇದು ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಧಾರ ಸರ್ಕಾರವನ್ನು ಬುಡಮೇಲು ಮಾಡಯವ ಯತ್ನ' ಎಂದು ಎಚ್. ಕೆ. ಪಾಟೀಲ ಹೇಳಿದರು.

ಸಚಿವರಾದ ಜಿ. ಪರಮೇಶ್ವರ, ಎಚ್. ಕೆ. ಪಾಟೀಲ, ಕೆ. ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ, ಕೃಷ್ಷ ಬೈರೇಗೌಡ ಸೇರಿದಂತೆ ಬಹುತೇಕ ಎಲ್ಲ ಸಚುವರು, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT