ಅಂತೆಯೇ, ‘ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿರುವ ಈ ಸಂಬಂಧದ ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆ ಮುಂದೂಡಬೇಕು ಹಾಗೂ ಯಾವುದೇ ಕ್ರಮ ಕೈಗೊಳ್ಳಬಾರದು ಎಂಬ ಈ ಹಿಂದಿನ ಆದೇಶವು ಸದರಿ ಪ್ರಕರಣದ ತೀರ್ಪು ಪ್ರಕಟವಾಗುವತನಕ ಜಾರಿಯಲ್ಲಿರುತ್ತದೆ’ ಎಂದು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕಟಿಸಿದರು.