ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಪ್ರಕರಣ | ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ: ಪರಮೇಶ್ವರ

Published 22 ಆಗಸ್ಟ್ 2024, 6:21 IST
Last Updated 22 ಆಗಸ್ಟ್ 2024, 6:21 IST
ಅಕ್ಷರ ಗಾತ್ರ

ಬೆಂಗಳೂರು: ಮುಡಾ ವಿಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವ ಬದಲು, ಈ ಪ್ರಕರಣದ ವಿಚಾರಣೆಗೆ ರಾಜ್ಯ ಸರ್ಕಾರ ರಚಿಸಿರುವ ಪಿ.ಎನ್. ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ‌ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿರೋಧ ಪಕ್ಷದವರು ಪದೇ ಪದೇ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಡಾ ಬಗ್ಗೆ ದೇಸಾಯಿ ಆಯೋಗವು ತನಿಖೆ ಆರಂಭಿಸಿದೆ. ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ಆಯೋಗಕ್ಕೆ ನೀಡಲಿ. ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ ಎಂದ ಅವರು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ‌ ಪ್ರತಿಕ್ರಿಯಿಸಲು ಹೋಗುವುದಿಲ್ಲ’ ಎಂದು ಹೇಳಿದರು.

ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕಲ್ ಡಿಕುನ್ಹಾ ಅವರ ವರದಿ ಬರುವರೆಗೂ ಏನನ್ನು ಮಾಡಲಾಗುವುದಿಲ್ಲ. ವರದಿಯಲ್ಲಿ ಏನು ಶಿಫಾರಸು ಮಾಡುತ್ತಾರೆ ಎಂಬುದನ್ನು ಗಮನಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಅಪರಾಧ ಪ್ರಕರಣ ದಾಖಲಿಸಬೇಕು ಎಂದು ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬಿಜೆಪಿಯವರು ಸೃಷ್ಟಿ ಮಾಡಿದ್ದಾರೆ. ಬಿಜೆಪಿಯವರ ಇತ್ತೀಚಿನ ಬೆಳವಣಿಗೆಗಳೇ ಇದಕ್ಕೆ ಕಾರಣ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT