ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ‘ಮುಖ್ಯಮಂತ್ರಿ ಕಾನೂನುಬದ್ಧವಾಗಿಯೇ ನಿವೇಶನ ಪಡೆದುಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಡಾ ಅಧ್ಯಕ್ಷರಾಗಿದ್ದ ಪಿ.ರಾಜೀವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.