ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

MUDA Scam | ಪಾದಯಾತ್ರೆ, ಮೈತ್ರಿಪಕ್ಷಗಳ ಹೋರಾಟಕ್ಕೆ ಜಯ: ನಿಖಿಲ್ ಕುಮಾರಸ್ವಾಮಿ

Published 17 ಆಗಸ್ಟ್ 2024, 7:18 IST
Last Updated 17 ಆಗಸ್ಟ್ 2024, 7:18 IST
ಅಕ್ಷರ ಗಾತ್ರ

ಬೆಂಗಳೂರು: 'ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಗೌರವಾನ್ವಿತ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ' ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ನಿಖಿಲ್, 'ಈ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು' ಎಂದು ಹೇಳಿದ್ದಾರೆ.

'ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ' ಎಂದು ನುಡಿದಿದ್ದಾರೆ.

'ಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೇ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ' ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT