‘ಸತ್ತ ವ್ಯಕ್ತಿ ಹೆಸರಿನಲ್ಲಿ ಡಿನೋಟಿಫೈ’
ಮುಡಾ ನಿವೇಶನ ಹಂಚಿಕೆಯಲ್ಲಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ಮತ್ತು ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಅವರ ಕೋರಿಕೆಯಾಗಿತ್ತು. ಮೃತ ನಿಂಗ ಉರುಫ್ ಜವರನ ಹೆಸರಿನಲ್ಲಿ ಡಿನೋಟಿಫೈ ಮಾಡಲಾಗಿದೆ. ಅದಾಗಲೇ ನಿವೇಶನ ಹಂಚಿಕೆ ಮಾಡಲಾಗಿದ್ದ ಜಮೀನು ತಮ್ಮದು ಎಂದು ತೋರಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ನಿಂಗ ಉರುಫ್ ಜವರನ ಕುಟುಂಬದ ಎಲ್ಲ ಸದಸ್ಯರನ್ನು ಮುಚ್ಚಿಟ್ಟು, ಒಬ್ಬರ ಹೆಸರಿನಲ್ಲಿ ಆಸ್ತಿ ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ಕೃಷ್ಣ ಅವರ ಆರೋಪ.