ಮುದಗಲ್: ‘ತಮಿಳುನಾಡಿನಲ್ಲಿ ಜಾತ್ಯತೀತ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಕಾಂಗ್ರೆಸ್ ಯಾವ ಪಕ್ಷಕ್ಕೂ ಮೋಸ ಮಾಡಿಲ್ಲ. ಜಾತ್ಯತೀತ ತತ್ವದ ಉಳಿವಿಗಾಗಿ ಟಿವಿಕೆ ಪಕ್ಷಕ್ಕೆ ಬೆಂಬಲ ನೀಡಿದೆ’ ಎಂದರು.

‘ರಾಜ್ಯದಲ್ಲಿ ಸಿ.ಎಂ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಡಲಾಗಿದೆ. ನಾನು ಸಿ.ಎಂ ಸ್ಥಾನದ ಆಕಾಂಕ್ಷಿಯಲ್ಲ. ಹೈಕಮಾಂಡ್, ಪಕ್ಷದ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ’ ಎಂದರು.

‘ಹಟ್ಟಿ ಕಂಪನಿ ಅಧ್ಯಕ್ಷ ಸ್ಥಾನ ಸ್ಥಳೀಯರಿಗೆ ನೀಡಬೇಕು ಎನ್ನುವ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೆ ತರುತ್ತೇನೆ. ಮುದಗಲ್ ತಾಲ್ಲೂಕು ಕೇಂದ್ರ ಘೋಷಣೆ ಮತ್ತು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಕುರಿತು ಸಿ.ಎಂ ಬಳಿ ಚರ್ಚಿಸುತ್ತೇನೆ’ ಎಂದರು. ಶಾಸಕ ಬಸನಗೌಡ ತುರ್ವಿಹಾಳ, ಮಾಜಿ ಸಚಿವ ಅಮರೇಗೌಡ ಬಯ್ಯಾಪುರ, ಅಮರಗುಂಡಪ್ಪ ಮೇಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-32-890537095

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.