ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ರಮ ಜೀಪ್‌ ರ‍್ಯಾಲಿ: ಕ್ರಮಕ್ಕೆ ಈಶ್ವರ ಖಂಡ್ರೆ ಸೂಚನೆ

Published : 1 ಸೆಪ್ಟೆಂಬರ್ 2024, 15:55 IST
Last Updated : 1 ಸೆಪ್ಟೆಂಬರ್ 2024, 15:55 IST
ಫಾಲೋ ಮಾಡಿ
Comments

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಬಾಳೂರು ಸಮೀಪ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಆಫ್‌ರೋಡಿಂಗ್‌ ರ‍್ಯಾಲಿ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಾಳೂರು ಸಮೀಪದ ಹೊಸಕೆರೆ, ಒಂಬತ್ತು ಗುಡ್ಡ ಮತ್ತು ಎತ್ತಿನ ಭುಜದ ವ್ಯಾಪ್ತಿಯ ತೋಟಗಳು ಮತ್ತು ಅರಣ್ಯ ಪ್ರದೇಶದಲ್ಲಿ ಶನಿವಾರ ರ‍್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರು, ಹಾಸನ ಮತ್ತು ಚಿಕ್ಕಮಗಳೂರುಗಳಿಂದ 50ಕ್ಕೂ ಹೆಚ್ಚು 4X4 ವಾಹನಗಳಲ್ಲಿ ಬಂದಿದ್ದವರು ರ‍್ಯಾಲಿಯಲ್ಲಿ ಭಾಗಿಯಾಗಿದ್ದರು. ಇದಕ್ಕೆ ಸ್ಥಳೀಯರಿಂದ ಭಾರಿ ಆಕ್ಷೇಪ ವ್ಯಕ್ತವಾಗಿತ್ತು.

ಅರಣ್ಯ ಇಲಾಖೆಯ ಅನುಮತಿ ಪಡೆಯದೇ ರ‍್ಯಾಲಿಯನ್ನು ಆಯೋಜಿಸಲಾಗಿತ್ತು ಎಂಬುದನ್ನು ಅರಣ್ಯಾಧಿಕಾರಿಗಳು ದೃಢಪಡಿಸಿದ್ದರು. ‘ಪತ್ರಿಕೆಗಳಲ್ಲಿ ಈ ಬಗ್ಗೆ ಸುದ್ದಿ ಪ್ರಕಟವಾಗಿದ್ದನ್ನು ಗಮನಿಸಲಾಗಿದೆ. ಆನೆ ಕಾರಿಡಾರ್‌ ಪ್ರದೇಶದಲ್ಲೂ ರ‍್ಯಾಲಿ ನಡೆಸಿರುವುದು ಗೊತ್ತಾಗಿದೆ. 52 ವಾಹನಗಳು ಭಾಗಿಯಾಗಿದ್ದವು ಎಂಬ ಮಾಹಿತಿ ಇದೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ’ ಎಂದು ಖಂಡ್ರೆ ತಿಳಿಸಿದ್ದಾರೆ.

‘ಅರಣ್ಯ ಪ್ರದೇಶದಲ್ಲಿ ರ‍್ಯಾಲಿ ನಡೆದಿದ್ದರೆ ಅರಣ್ಯ ಸಂರಕ್ಷಣಾ ಕಾಯ್ದೆ ಅಡಿ ಮತ್ತು ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಆರೋಪಗಳಲ್ಲಿ ಪ್ರಕರಣ ದಾಖಲಿಸಲು ಸೂಚಿಸಲಾಗಿದೆ. ಅರಣ್ಯ ಮತ್ತು ಪರಿಸರಕ್ಕೆ ಆಗಿರುವ ಹಾನಿಯ ಬಗ್ಗೆ ವರದಿ ನೀಡುವಂತೆಯೂ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT