ಮಂಗಳವಾರ ಇಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಮುನಿಯಪ್ಪ, ‘ಗ್ರಾಮಾಂತರ ಜಿಲ್ಲೆಯಲ್ಲಿ 45 ಸಾವಿರ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿವೆ. ಈ ಕೈಗಾರಿಕೆಗಳಲ್ಲಿ ಸುಮಾರು ನಾಲ್ಕು ಲಕ್ಷ ಮಂದಿ ಕೆಲಸ ಮಾಡುತ್ತಿದ್ದಾರೆ. ಆದರೆ, ಜಿಲ್ಲೆಯ ಯುವಜನರಿಗೆ ಕೌಶಲ ತರಬೇತಿ ಸಿಗುತ್ತಿಲ್ಲ. ಹೀಗಾಗಿ, ಬಹು ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪಿಸಬೇಕು’ ಎಂದು ಅಭಿಪ್ರಾಯಪಟ್ಟರು.