‘ಮೀಸಲಾತಿ ಎರಡು ಹಂತಗಳಲ್ಲಿ ಅನ್ವಯಿಸುತ್ತದೆ. ಒಂದು ಪುರಸಭೆಗೆ ಆಯ್ಕೆಯಾಗುವ ಸಮಯದಲ್ಲಿ ಮತ್ತು ನಂತರ ಅಧ್ಯಕ್ಷ ಅಥವಾ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಸಂದರ್ಭದಲ್ಲಿ. ಹೀಗಾಗಿ ಯಾವ್ಯಾವ ವರ್ಗದ ಅಭ್ಯರ್ಥಿಗಳು ಅಯ್ಕೆಯಾಗಿದ್ದಾರೆ ಎಂಬ ದತ್ತಾಂಶ ಸಂಗ್ರಹಿಸಿ ಹುದ್ದೆಗಳಿಗೆ ಮೀಸಲು ಪಟ್ಟಿ ಮಾಡಿದರೆ ಹಾಗೂ ಒಂದು ಹುದ್ದೆಗೆ ಮೀಸಲಾತಿ ನೀಡಿದರೆ ಮತ್ತು ಆ ವರ್ಗಕ್ಕೆ ಯಾವುದೇ ಅಭ್ಯರ್ಥಿ ಕಂಡುಬಂದಿಲ್ಲ ಎಂದಾದರೆ ಸೂಕ್ತ ಬದಲಾವಣೆಗಳನ್ನು ಮಾಡಲು ಸರ್ಕಾರಕ್ಕೆ ಅವಕಾಶ ಇರುತ್ತದೆ. ಇಲ್ಲವಾದರೆ ಆ ಹುದ್ದೆಗಳೂ ಖಾಲಿ ಉಳಿಯುತ್ತವೆ. ಆಗ ಮೀಸಲು ಉದ್ದೇಶ ಸಾರ್ಥಕವಾಗುವುದಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.