ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರ ಬೇಡಿಕೆಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯವರೊಂದಿಗೆ ಶುಕ್ರವಾರ ನಡೆದ ಮಾತುಕತೆ ವಿಫಲವಾಗಿದ್ದು, ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಸಲು ನೌಕರರು ನಿರ್ಧರಿಸಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಅವರು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತಿನ ಪದಾಧಿಕಾರಿಗಳನ್ನು ಮಾತುಕತೆಗೆ ಕರೆದಿದ್ದರು. ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಸಲು ನೌಕರರು ಪಟ್ಟು ಹಿಡಿದರು.

‘ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರಿಸಲು ಸರ್ಕಾರ ವಿಫಲವಾಗಿದೆ. ಕಾರ್ಯದರ್ಶಿಗಳ ಜೊತೆಯಲ್ಲಿ ನಡೆದ ಚರ್ಚೆ ಫಲಪ್ರದವಾಗಿಲ್ಲ. ಆದ್ದರಿಂದ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರೆಯಲಿದೆ’ ಎಂದು ಪರಿಷತ್ನ ರಾಜ್ಯ ಘಟಕದ ಅಧ್ಯಕ್ಷ ಎ. ಅಮೃತ್ರಾಜ್ ತಿಳಿಸಿದರು.

ಹುಬಳ್ಳಿ–ಧಾರವಾಡ, ತುಮಕೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ವಿಜಯಪುರ ಹಾಗೂ ಕಲಬುರಗಿ, ಬೆಳಗಾವಿ, ಬಳ್ಳಾರಿ ಮಹಾನಗರ ಪಾಲಿಕೆಗಳಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಷಡಕ್ಷರಿರವರು, ಸಚಿವಾಲಯ ನೌಕರರ ಸಂಘದ ಅಧ್ಯಕ್ಷರಾದ ರಮೇಶ್ ಸಂಗಾ ಮತ್ತು 10 ಮಹಾನಗರ ಪಾಲಿಕೆಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.

ಬೇಡಿಕೆಗಳು: 7ನೇ ವೇತನ ಆಯೋಗದ ವರದಿ ಮಹಾನಗರ ಪಾಲಿಕೆ ನೌಕರರಿಗೆ ವಿಸ್ತರಣೆ, ವೃಂದ ಮತ್ತು ನೇಮಕಾತಿಯಲ್ಲಿ ತಿದ್ದುಪಡಿ ಹಾಗೂ ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯ ಹಾಗೂ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಬೇಕು. ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಪ್ರತಿವರ್ಷ ಕ್ರೀಡಾಕೂಟ ಆಯೋಜನೆ ಮಾಡಬೇಕು. ಮಹಾನಗರ ಪಾಲಿಕೆಯಲ್ಲಿ ಮುಂಬಡ್ತಿ ನೀಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.