ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲೆ ಪ್ರಕರಣ: ನಟ ದರ್ಶನ್‌ ನ್ಯಾಯಾಂಗ ಬಂಧನ ವಿಸ್ತರಣೆ

Published 4 ಜುಲೈ 2024, 16:21 IST
Last Updated 4 ಜುಲೈ 2024, 16:21 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದ ರೇಣುಕ ಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳಿಗೆ ಇದೇ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ 24ನೇ ಎಸಿಎಂಎಂ ಕೋರ್ಟ್‌ನಲ್ಲಿ; ಪರಪ್ಪನ ಅಗ್ರಹಾರದಲ್ಲಿರುವ 13 ಮತ್ತು ತುಮಕೂರು ಜೈಲಿನಲ್ಲಿರುವ ನಾಲ್ವರು ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮುಖಾಂತರ ಗುರುವಾರ ಹಾಜರಾಗಿದ್ದರು.

ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಮಾಡಿದ, ‘ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಬೇಕು’ ಎಂಬ ಮನವಿಯನ್ನು ಹೆಚ್ಚುವರಿ ನ್ಯಾಯಾಧೀಶ ವಿಶ್ವನಾಥ ಚನ್ನಬಸಪ್ಪ ಗೌಡರ ಮಾನ್ಯ ಮಾಡಿದರು. ಎಲ್ಲಾ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT