ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಲೆ ಪ್ರಕರಣ: ರೇಣುಕಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದ ಆರೋಪಿ ಬಂಧನ

Published 16 ಜೂನ್ 2024, 18:59 IST
Last Updated 16 ಜೂನ್ 2024, 18:59 IST
ಅಕ್ಷರ ಗಾತ್ರ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪಶ್ಚಿಮ ವಿಭಾಗದ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ರಾಜು ಅಲಿಯಾಸ್ ಧನರಾಜ್ ಬಂಧಿತ ಆರೋಪಿ. ರೇಣುಕಸ್ವಾಮಿ ಕೊಲೆಯಾದ ಬಳಿಕ ರಾಜು ತಲೆಮರೆಸಿಕೊಂಡಿದ್ದ. ಪ್ರಕರಣದಲ್ಲಿ ಈತ 9ನೇ ಆರೋಪಿ ಆಗಿದ್ದ. ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರೇಣುಕಸ್ವಾಮಿಯನ್ನು ಪಟ್ಟಣಗೆರೆ ಶೆಡ್‌ಗೆ ಕರೆತಂದಾಗ ಆರೋಪಿ ನಂದೀಶ್ ಜೊತೆಗೆ ಸೇರಿ ‌ರಾಜು ಎಲೆಕ್ಟ್ರಿಕ್ ಶಾಕ್ ನೀಡಿದ್ದ. ಮೆಗ್ಗರ್ ಸಾಧನ‌‌ ಬಳಸಿ ರೇಣುಕಸ್ವಾಮಿಗೆ ಎಲೆಕ್ಟ್ರಿಕ್ ಶಾಕ್ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT