ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುರುಘಾ ಶರಣರಿಗೆ‌ ಹೃದಯ ಸಂಬಂಧಿ ಸಮಸ್ಯೆ: ಜಯದೇವಗೆ ಸ್ಥಳಾಂತರಿಸಲು ನಿರ್ಧಾರ

Last Updated 2 ಸೆಪ್ಟೆಂಬರ್ 2022, 8:22 IST
ಅಕ್ಷರ ಗಾತ್ರ

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತರಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಬೆಳಿಗ್ಗೆ 9.30ಕ್ಕೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ಪರೀಕ್ಷೆ ನಡೆಸಿದ ವೈದ್ಯರ ತಂಡದ ಶಿಫಾರಸಿನ ಮೇರೆಗೆ ಬೆಂಗಳೂರಿಗೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ.

ಹೊರರೋಗಿ ಘಟಕದಲ್ಲಿದ್ದ ವೈದ್ಯಾಧಿಕಾರಿ ಶಿವಕುಮಾರ, ವೈದ್ಯೆ ಲೀಲಾ ರಾಘವನ್ ಅವರ ಸಲಹೆ ಮೇರೆಗೆ ಸಿಟಿ ಸ್ಕ್ಯಾನ್, ಆಲ್ಟ್ರಾಸೌಂಡ್, ರಕ್ತ ಪರೀಕ್ಷೆ ಸೇರಿದಂತೆ ಇತರ ಪರೀಕ್ಷೆಗಳನ್ನು ನಡೆಸಲಾಗಿತ್ತು. ಹೃದಯ ಸಂಬಂಧಿ ಸಮಸ್ಯೆ ಪತ್ತೆಯಾಗಿದ್ದರಿಂದ ತಜ್ಞ ವೈದ್ಯರ ತಂಡವನ್ನು. ದಾವಣಗೆರೆಯಿಂದ ಕರೆತರಲಾಗಿತ್ತು.

'ದಾವಣಗೆರೆಯ ಎಸ್.ಎಸ್. ನಾರಾಯಣ ಹೃದಯಾಲಯದ ವೈದ್ಯರಾದ ಡಾ.ಮಲ್ಲೇಶ ಹಾಗೂ ಶ್ರೀನಿವಾಸ್ ಅವರು ಶರಣರ ಆರೋಗ್ಯ ಪರೀಕ್ಷೆ ಮಾಡಿದ್ದು ಹೃದ್ರೋಗ ಸಮಸ್ಯೆ ಇರುವುದು ಖಚಿತವಾಗಿದೆ. ಹತ್ತು ವರ್ಷದಿಂದ ಹಲವು ಬಗೆಯ ಆರೋಗ್ಯ ಸಮಸ್ಯೆಯನ್ನು ಅವರು ಎದುರಿಸುತ್ತಿದ್ದರು. ವೈದ್ಯರ ತಂಡ ಹೆಚ್ಚಿನ ಚಿಕಿತ್ಸೆಯ ಸಲಹೆ ನೀಡಿದೆ. ಆಂಬ್ಯುಲೆನ್ಸ್ ಮೂಲಕವೇ ಬೆಂಗಳೂರಿಗೆ ಕರೆದೊಯ್ಯಲಾಗುವುದು' ಎಂದು ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಬಸವರಾಜ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT