ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌-19| ಪಿಎಂ ಕೇರ್ಸ್‌ಗೆ ₹5 ಲಕ್ಷ ದೇಣಿಗೆ ನೀಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ

Last Updated 9 ಮೇ 2020, 10:22 IST
ಅಕ್ಷರ ಗಾತ್ರ

ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಎಂ. ಮಸೂದ್ ಅವರು ಪ್ರಧಾನ ಮಂತ್ರಿ ಕೇರ್ ನಿಧಿಗೆ ₹ 5 ಲಕ್ಷ ದೇಣಿಗೆಯ ಚೆಕ್‌ನ್ನು ಮಂಗಳೂರು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಹಸ್ತಾಂತರಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಇರುವ ಸಂಸದರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಚೆಕ್ ಹಸ್ತಾಂತರಿಸಿದರು.

ಮಸೂದ್ ಅವರ ಸಹೋದರ ಹಾಗೂ ಅನಿವಾಸಿ ಉದ್ಯಮಿ ಕೆ.ಎಸ್. ನಿಸಾರ್ ಅಹ್ಮದ್ ಅವರು ಈ ದೇಣಿಗೆಯನ್ನು ಪಿಎಂ ಕೇರ್‌ನಿಧಿಗೆ ನೀಡಿದ್ದಾರೆ.

ಗಲ್ಫ್‌ ರಾಷ್ಟ್ರಗಳಲ್ಲಿ ಉದ್ಯಮವನ್ನು ನಡೆಸುತ್ತಿರುವ ನಿಸಾರ್ ಅಹ್ಮದ್, ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಈ ಮೂಲಕ ಸ್ಪಂದಿಸಿದ್ದು, ಕೇಂದ್ರದ ಕೊರೊನಾ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ್ದಾರೆ. ಜೊತೆಗೆ, ವಿವಿಧ ದೇಶಗಳಲ್ಲಿ ಇರುವ ಕರಾವಳಿ ಪ್ರಜೆಗಳನ್ನು ಏರ್ ಲಿಫ್ಟ್ ಮಾಡಿಸುವಲ್ಲಿ ನಿಸಾರ್ ಅಹ್ಮದ್ ಬಹುವಾಗಿ ಶ್ರಮಿಸುತ್ತಿದ್ದಾರೆ.

ಪ್ರಧಾನಿಗೆ ಅಭಿನಂದನೆ
ಇದೇ ವೇಳೆ, ವಿವಿಧ ದೇಶಗಳಲ್ಲಿ ಸಂಕಷ್ಟದಲ್ಲಿ ಇರುವ ಅನಿವಾಸಿ ಭಾರತೀಯರನ್ನು ಏರ್‌ಲಿಫ್ಟ್ ಮಾಡುವ ದೃಢ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಸಾರ್ ಅಹ್ಮದ್ ಪ್ರಶಂಸಿಸಿದ್ದಾರೆ. ನಳಿನ್ ಕುಮಾರ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಸಾಂಕೇತಿಕವಾಗಿ ಮೋದಿ ಕ್ರಮವನ್ನು ಬೆಂಬಲಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ನಾಯಕ ರವಿಶಂಕರ್ ಮಿಜಾರ್, ಡಾ. ಆರೀಫ್ ಮಸೂದ್, ಹಾಜಿ ಅಬ್ದುಲ್ ರಜಾಕ್, ಮಾಸ್ಟರ್ ಫ್ಲವರ್ಸ್ ಫಕೀರಬ್ಬ, ಮಹಮ್ಮದ್ ಹನೀಫ್ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT