ಬೆಂಗಳೂರು: ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಲಾಗಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

‘ವಕ್ಫ್ ಮಂಡಳಿಗಳಿಗೆ ಮುಸ್ಲಿಂ ವಿವಾಹಗಳನ್ನು ಕಡ್ಡಾಯವಾಗಿ ನೋಂದಾಯಿಸುವ ಯಾವುದೇ ಶಾಸನಾತ್ಮಕ ಅಧಿಕಾರ ಇಲ್ಲ’ ಎಂದು ಆಕ್ಷೇಪಿಸಿ ಎ.ಆಲಂ ಪಾಷ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮೆಮೊ ಸಲ್ಲಿಸಿದ ಸರ್ಕಾರದ ಪರ ವಕೀಲರು, ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2023ರ ಆಗಸ್ಟ್ 30ರಂದು ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ’ ಎಂದು ವಿವರಿಸಿದರು. ಅದನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿ ಇತ್ಯರ್ಥಪಡಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.