ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಾಲಯದ ಪೂಜೆ ಕಾಯ್ದಿರಿಸಲು ಆ್ಯಪ್‌: ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ

Published 16 ಸೆಪ್ಟೆಂಬರ್ 2023, 23:30 IST
Last Updated 16 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ಮುಜರಾಯಿ ಇಲಾಖೆಯ ಪ್ರಮುಖ ದೇವಸ್ಥಾನಗಳಲ್ಲಿ ಪೂಜೆ ಮಾಡಿಸಲು ಆನ್‌ಲೈನ್‌ ಮೂಲಕ ಮುಂಗಡವಾಗಿ ಕಾಯ್ದಿರಿಸುವ ಆ್ಯಪ್‌ ಬಿಡುಗಡೆಗೆ ಸರ್ಕಾರ ಮುಂದಾಗಿದೆ.

ಮುಜರಾಯಿ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

‘ಆನ್‌ಲೈನ್‌ ವ್ಯವಸ್ಥೆಯಾದರೆ ಭಕ್ತರಿಗೆ ಉಪಯೋಗವಾಗಲಿದೆ. ಆ್ಯಪ್‌ ಮೂಲಕ ಕೊಠಡಿಗಳನ್ನು ಕಾಯ್ದಿರಿಸಲೂ ಅವಕಾಶ ಕಲ್ಪಿಸಲಾಗುವುದು’ ಎಂದು ವಿವರಿಸಿದರು.

ಶಕ್ತಿ ಯೋಜನೆ ಆರಂಭವಾದ ಬಳಿಕ ದೇವಾಲಯಗಳಿಗೆ ಬರುವ ಭಕ್ತರ ಪ್ರಮಾಣ ಹೆಚ್ಚಿದೆ. ‘ಎ’ ಮತ್ತು ‘ಬಿ’ ದರ್ಜೆಯ ದೇವಸ್ಥಾನಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ತಾಯಂದಿರಿಗೆ ಶಿಶು ಆರೈಕೆ ಮಾಡಲು ಹಾಗೂ ಹಾಲು ಉಣಿಸಲು ಪ್ರತ್ಯೇಕ ‘ಅಮ್ಮ’ ಕೇಂದ್ರ ತೆರೆಯಬೇಕು. 65 ವರ್ಷ ದಾಟಿದ ಹಿರಿಯರಿಗೆ, ಅಂಗವಿಕಲರಿಗೆ ನೇರ ಮತ್ತು ಸರಾಗವಾಗಿ ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಬೇಕು. ಎಲ್ಲ ದೇವಸ್ಥಾನಗಳಲ್ಲಿ ಕುಡಿಯುವ ನೀರು, ಶೌಚಾಲಯ ಸಹಿತ ಮೂಲ ಸೌಲಭ್ಯಗಳಿರಬೇಕು. ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಆರಂಭಿಕ ಹಂತವಾಗಿ 25 ದೇವಸ್ಥಾನಗಳನ್ನು ಅಭಿವೃದ್ಧಿಪಡಿಸಲು ಮಾಸ್ಟರ್‌ಪ್ಲಾನ್‌ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ದೇವಾಲಯಗಳ ಸುತ್ತ 100 ಮೀಟರ್ ಸುತ್ತಳತೆಯಲ್ಲಿ ಮದ್ಯ, ಸಿಗರೇಟು, ಗುಟ್ಕಾ ಹಾಗೂ ಇತರೆ ಮಾದಕ ವಸ್ತುಗಳ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶ ಹೊರಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಒತ್ತುವರಿ ತೆರವಿಗೆ ಕ್ರಮ: ‘ದೇವಾಲಯಗಳ ಸ್ಥಿರ ಆಸ್ತಿಗಳನ್ನು ಸರ್ವೆ ಮಾಡಬೇಕು. ಒತ್ತುವರಿ ಇದ್ದರೆ ತೆರವುಗೊಳಿಸಬೇಕು. ಆಸ್ತಿ ದಾಖಲೀಕರಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

ಅರ್ಜಿ ಸಲ್ಲಿಸಿದರೆ ಮಹಿಳೆಗೂ ಅರ್ಚಕ ಸ್ಥಾನ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಿಗೆ ಅರ್ಚಕರಾಗಲು ಮಹಿಳೆಯರು ಅರ್ಜಿ ಸಲ್ಲಿಸಿದರೆ ಅವರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದರು. ತಮಿಳುನಾಡಿನಲ್ಲಿ ಮಹಿಳಾ ಅರ್ಚಕರಿಯರಿಗೆ ಅವಕಾಶ ನೀಡಿದಂತೆ ಕರ್ನಾಟಕದಲ್ಲೂ ಜಾರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. ತಸ್ತೀಕ್ ಮೊತ್ತವನ್ನು ನೇರವಾಗಿ ಅರ್ಚಕರ ಖಾತೆಗೆ ಪಾವತಿ ಮಾಡಲು ಕ್ರಮ ವಹಿಸಲಾಗುವುದು ಎಂದರು.

ಶಕ್ತಿ ಯೋಜನೆ ಆರಂಭವಾದ ಬಳಿಕ ದೇವಾಲಯಗಳಿಗೆ ಬರುವ ಭಕ್ತರ ಪ್ರಮಾಣ ಹೆಚ್ಚಿದೆ. ‘ಎ’ ಮತ್ತು ‘ಬಿ’ ದರ್ಜೆಯ ದೇವಸ್ಥಾನಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ತಾಯಂದಿರಿಗೆ ಶಿಶು ಆರೈಕೆ ಮಾಡಲು ಹಾಗೂ ಹಾಲು ಉಣಿಸಲು ಪ್ರತ್ಯೇಕ ‘ಅಮ್ಮ’ ಕೇಂದ್ರ ತೆರೆಯಬೇಕು. 65 ವರ್ಷ ದಾಟಿದ ಹಿರಿಯರಿಗೆ, ಅಂಗವಿಕಲರಿಗೆ ನೇರ ಮತ್ತು ಸರಾಗವಾಗಿ ದೇವರ ದರ್ಶನ ಪಡೆಯಲು ವ್ಯವಸ್ಥೆ ಮಾಡಬೇಕು. ಎಲ್ಲ ದೇವಸ್ಥಾನಗಳಲ್ಲಿ ಕುಡಿಯುವ ನೀರು, ಶೌಚಾಲಯ ಸಹಿತ ಮೂಲ ಸೌಲಭ್ಯಗಳಿರಬೇಕು. ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಆರಂಭಿಕ ಹಂತವಾಗಿ 25 ದೇವಸ್ಥಾನಗಳನ್ನು ಅಭಿವೃದ್ಧಿ
ಪಡಿಸಲು ಮಾಸ್ಟರ್‌ಪ್ಲಾನ್‌ ತಯಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ದೇಗುಲಗಳ ಸುತ್ತ 100 ಮೀಟರ್ ಸುತ್ತಳತೆಯಲ್ಲಿ ಮದ್ಯ, ಸಿಗರೇಟು, ಗುಟ್ಕಾ ಹಾಗೂ ಇತರೆ ಮಾದಕ ವಸ್ತುಗಳ ಮಾರಾಟವನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶ ಹೊರಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಒತ್ತುವರಿ ತೆರವಿಗೆ ಕ್ರಮ: ‘ದೇವಾಲಯಗಳ ಸ್ಥಿರ ಆಸ್ತಿಗಳನ್ನು ಸರ್ವೆ ಮಾಡಬೇಕು. ಒತ್ತುವರಿ ಇದ್ದರೆ ತೆರವುಗೊಳಿಸಬೇಕು. ಆಸ್ತಿ ದಾಖಲೀಕರಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

ಅರ್ಜಿ ಸಲ್ಲಿಸಿದರೆ ಮಹಿಳೆಗೂ ಅರ್ಚಕ ಸ್ಥಾನ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಿಗೆ ಅರ್ಚಕರಾಗಲು ಮಹಿಳೆಯರು ಅರ್ಜಿ ಸಲ್ಲಿಸಿದರೆ ಅವರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದರು.

ತಮಿಳುನಾಡಿನಲ್ಲಿ ಮಹಿಳಾ ಅರ್ಚಕರಿಯರಿಗೆ ಅವಕಾಶ ನೀಡಿದಂತೆ, ಕರ್ನಾಟಕದಲ್ಲೂ ಜಾರಿ ಮಾಡುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.

ತಸ್ತೀಕ್ ಮೊತ್ತವನ್ನು ನೇರವಾಗಿ ಅರ್ಚಕರ ಖಾತೆಗೆ ಪಾವತಿ ಮಾಡಲು ಕ್ರಮ ವಹಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT