ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಪೆನ್‌ಡ್ರೈವ್ ವಿಚಾರದಲ್ಲಿ ನನ್ನೊಬ್ಬನಿಗೇ ಅಲ್ಲ ಇಡೀ ಸಮಾಜಕ್ಕೆ ಮುಜುಗರ ಆಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಈ ವಿಚಾರದಲ್ಲಿ ದೇವೇಗೌಡರ ಕುಟುಂಬದ ಹೆಸರು ಎಳೆದು ತರಬೇಡಿ ಎಂದು ಕಾಂಗ್ರೆಸ್ ಮುಖಂಡರಿಗೆ ತಾಕೀತು ಮಾಡಿದರು. ಕಾಂಗ್ರೆಸ್ ಮಹಾನುಭಾವರು ನೀವು ಕಳಂಕವಿಲ್ಲದೇ ಬಂದವರಾ? ಇಲ್ಲಿ ದೇವೆಗೌಡರು ಕುಮಾರಸ್ವಾಮಿ ಹೆಸರು ಯಾಕೆ ತರುತ್ತೀರಿ. ತಪ್ಪು ಯಾರು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು ಎಂದು ನಾನೇ ಸ್ಪಷ್ಟಪಡಿಸಿದ್ದೇನಲ್ಲ ಎಂದರು ಹರಿಹಾಯ್ದರು. ನಮ್ಮ ಕುಟುಂಬವೇ ಬೇರೆ, ಎಚ್.ಡಿ.ರೇವಣ್ಣ ಅವರ ಕುಟುಂಬವೇ ಬೇರೆ. ಹಾಸನದಲ್ಲಿ ಅವರು ನಾಲ್ಕು ಜನ ಪ್ರತ್ಯೇಕವಾಗಿ ವಾಸವಿದ್ದಾರೆ ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಹೇಳುತ್ತಿದ್ದೇನೆ ಇಲ್ಲಿ ಕುಟುಂಬದ ಹೆಸರು ತರಬೇಡಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.