ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ ವೇ: ಟೋಲ್‌ ಮುಂದೂಡಿಕೆ

Last Updated 27 ಫೆಬ್ರುವರಿ 2023, 14:37 IST
ಅಕ್ಷರ ಗಾತ್ರ

ಮೈಸೂರು: ‘ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊದಲ ಹಂತದ ಟೋಲ್‌ ಕೇಂದ್ರಗಳಲ್ಲಿ ಶುಲ್ಕ ಸಂಗ್ರಹ ಕಾರ್ಯವನ್ನು ಮುಂದೂಡಲಾಗಿದೆ. ಸೇವಾ ರಸ್ತೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್‌ ಪಡೆಯುವುದಿಲ್ಲ’ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.

‘ಮಾರ್ಚ್‌ 15ರ ನಂತರ ಟೋಲ್‌ ಸಂಗ್ರಹಿಸಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.

‘ಸರ್ವಿಸ್‌ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ದ್ವಿಚಕ್ರವಾಹನ ಹಾಗೂ ತ್ರಿಚಕ್ರವಾಹನಗಳಿಗೆ ಎಕ್ಸ್‌ಪ್ರೆಸ್‌ ವೇನಲ್ಲಿ ಅವಕಾಶವಿರಲಿದೆ. ಸರ್ವೀಸ್ ರಸ್ತೆ ಪೂರ್ಣಗೊಂಡ ಬಳಿಕ ಅಪಘಾತ ಮುಕ್ತ ರಸ್ತೆಯನ್ನಾಗಿಸುವ ಉದ್ದೇಶದಿಂದಾಗಿ ಅವುಗಳಿಗೆ ಅವಕಾಶ ಕೊಡುವುದಿಲ್ಲ. ದ್ವಿಚಕ್ರವಾಹನ ಹಾಗೂ ತ್ರಿಚಕ್ರವಾಹನಗಳು ಸರ್ವಿಸ್‌ ರಸ್ತೆಯನ್ನು ಬಳಸಿಕೊಳ್ಳಬಹುದು. ಇದರಿಂದ ಅವರು ಟೋಲ್ ಪಾವತಿಸುವುದು ಕೂಡ ತಪ್ಪಲಿದೆ’ ಎಂದು ತಿಳಿಸಿದರು.

ಟೋಲ್‌ ಸಂಗ್ರಹ ಆರಂಭಿಸುವ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹೊರಡಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ–275ರಲ್ಲಿ ಬರುವ ಬೆಂಗಳೂರು ನಗರ ಜಿಲ್ಲೆಯ ಕಣಿಮಿಣಿಕೆ ಮತ್ತು ರಾಮನಗರ ಜಿಲ್ಲೆಯ ಶೇಷಗಿರಿಹಳ್ಳಿ ಬಳಿ ಬೆಂಗಳೂರು–ನಿಡಘಟ್ಟ ವಿಭಾಗದ 6 ಲೇನ್‌ಗಳ ಬಳಕೆಗಾಗಿ ಟೋಲ್‌ ಶುಲ್ಕ ಅನ್ವಯವಾಗಲಿದೆ. ಇದು 55.63 ಕಿ.ಮೀ. ಇದ್ದು, ಟೋಲಿಂಗ್ ರಸ್ತೆಯಾಗಿದೆ ಎಂದು ಪ್ರಾಧಿಕಾರ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT