ಮೈಸೂರು: ರಾಜ್ಯದ ಗಮನಸೆಳೆದಿದ್ದ, ಚಾಮುಂಡಿಬೆಟ್ಟ ತಪ್ಪಲಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

‘6 ಆರೋಪಿಗಳ ವಿರುದ್ಧ 1,499 ಪುಟಗಳ ದೋಷಾರೋಪ ಪಟ್ಟಿಯನ್ನು ಇಲ್ಲಿನ ಮೂರನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ. ಘಟನೆಗೆ ಸಂಬಂಧಿಸಿ 7 ಮಂದಿಯನ್ನು ಬಂಧಿಸಲಾಗಿತ್ತು. ಒಬ್ಬನ ಪಾತ್ರ ಇಲ್ಲ ಎಂಬುದು ಗೊತ್ತಾಗಿದ್ದರಿಂದ ಕೈಬಿಡಲಾಗಿದೆ. ಐಪಿಸಿ 397 (ದರೋಡೆ), 376ಡಿ (ಸಾಮೂಹಿಕ ಅತ್ಯಾಚಾರ), 109 (ಅಪರಾಧಕ್ಕೆ ಕುಮ್ಮಕ್ಕು), 120 ಬಿ (ಅಪರಾಧ ಸಂಚು) ಮತ್ತು 326 (ಮಾರಕಾಸ್ತ್ರಗಳಿಂದ ಹಲ್ಲೆ) ಸೆಕ್ಷನ್ಗಳನ್ನು ಆರೋಪಿಗಳ ವಿರುದ್ಧ ಹಾಕಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ದರೋಡೆ– ಆರೋಪಪಟ್ಟಿ ಸಲ್ಲಿಕೆ: ‘ಮೈಸೂರಿನಲ್ಲಿ ನಡೆದಿದ್ದ ಚಿನ್ನದ ಅಂಗಡಿ ದರೋಡೆ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ಮಂದಿಯ ವಿರುದ್ಧ ಇಲ್ಲಿನ ಎರಡನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ 1,410 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 7 ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೊಬ್ಬನ ಹುಡುಕಾಟ ನಡೆದಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.