ಮೈಸೂರು: ಮೈಸೂರು ದಸರಾ ಮಹೋತ್ಸವ ಈ ಭಾರಿಯೂ ನಡೆಯಲಿದೆ. ಆದರೆ ಸರಳವಾಗಿ ಯಾವ ರೀತಿ ಆಚರಿಸಬೇಕೆಂದು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕಬಿನಿಗೆ ಬಾಗಿನ ಅರ್ಪಿಸಿದ ಬಳಿಕ ಬೀಚನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇವೆ. ದಸರಾ ರೂಪುರೇಷೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ. ದಸರಾ ಉನ್ನತ ಮಟ್ಟದ ಸಮಿತಿ ಸಭೆಗೆ ಶೀರ್ಘದಲ್ಲೇ ದಿನಾಂಕ ನಿಗದಿ ಮಾಡುತ್ತೇವೆ ಎಂದರು.

ಕಾವೇರಿ ತಾಯಿಯ ಪೂಜೆ ಮಾಡಿ ಬಾಗಿನ ಅರ್ಪಿಸಲಾಗಿದೆ. ಕಬಿನಿಯಲ್ಲಿ ಮತ್ತೆ ಐದನೇ ವರ್ಷಕ್ಕೆ ಬಾಗಿನ ಅರ್ಪಿಸಲು ಸೌಭಾಗ್ಯ ನನಗೆ ಸಿಕ್ಕಿದೆ. ಇಂದು ರಾಜ್ಯದ ಎಲ್ಲ ಜಲಾಶಯಗಳಲ್ಲೂ ತುಂಬಿ ತುಳುಕುತ್ತಿದ್ದು, ಅಂತರ್ಜಲ ಕುಸಿಯುವುದು ತಪ್ಪಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಉತ್ತಮ ಮಳೆ ಕಾಣುತ್ತಿದೆ. ಪ್ರತಿವರ್ಷವೂ ಇದೇ ರೀತಿಯಲ್ಲಿ ಮಳೆ-ಬೆಳೆಯಾಗಲಿ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.