ಮೈಸೂರು: ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ, ಆಕೆಯ ಸ್ನೇಹಿತ ಪೊಲೀಸರಿಗೆ ಮತ್ತೊಮ್ಮೆ ಹೇಳಿಕೆ ನೀಡಿದ್ದಾರೆ.

‘ಸ್ನೇಹಿತೆಯೊಂದಿಗೆ ಸಂಜೆ ವಾಯುವಿಹಾರಕ್ಕೆ ತೆರಳಿದ್ದಾಗ 6 ಆರೋಪಿಗಳು ದೊಣ್ಣೆ ಮತ್ತು ಕಲ್ಲುಗಳಿಂದ ನನ್ನ ಮೇಲೆ ಹಲ್ಲೆ ನಡೆಸಿದರು. ಯುವತಿಯ ಮೇಲೂ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದರು. ಬಳಿಕ ನನ್ನ ತಂದೆಗೆ ನನ್ನಿಂದಲೇ ಕರೆ ಮಾಡಿಸಿ ₹3 ಲಕ್ಷವನ್ನು ಆನ್‌ಲೈನ್‌ನಲ್ಲೇ ಖಾತೆಗೆ ಹಾಕುವಂತೆ ಆಗ್ರಹಿಸಿದರು. ನಿರಾಕರಿಸಿದ್ದಕ್ಕೆ ಇನ್ನಷ್ಟು ಹೊಡೆದರು’ ಎಂದು ಸಂತ್ರಸ್ಥೆ ಸ್ನೇಹಿತ ಹೇಳಿಕೆ ನೀಡಿದ್ದಾರೆ.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರದ ಗುಡ್ಡದಲ್ಲಿ ಮಂಗಳವಾರ ರಾತ್ರಿ ಸುಮಾರು 7.30ರ ವೇಳೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ವಿಚಾರ ಬುಧವಾರ ಬಹಿರಂಗಗೊಂಡಿತ್ತು. ಪ್ರಕರಣ ಇಡೀ ದೇಶದ ಗಮನ ಸೆಳೆದಿದ್ದು, ಪೊಲೀಸರು ಆರೋಪಿಗಳ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅನುಮಾನಗೊಂಡಿದ್ದು, ಅವರ ಹುಡುಕಾಟ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.