ಮೈಸೂರು: ಮುಂದಿನ ದಿನಗಳಲ್ಲಿ ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.

ಖಾತೆ ಹಂಚಿಕೆ ವಿಚಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸೇರಿದ್ದು. ಮೈಸೂರು ಭಾಗದ ಅಭಿವೃದ್ಧಿಗೆ ಸಚಿವ ಸ್ಥಾನ ಸಿಗಬೇಕು ಎನ್ನುವ ಬೇಡಿಕೆ ಇದೆ. ಭವಿಷ್ಯದ ದಿನಗಳಲ್ಲಿ ಇದು ಈಡೇರಲಿದೆ ಎಂದು ಅವರು ಸೋಮವಾರ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದರು.

ಟಿಪ್ಪು ವಿಷಯ ಕೈಬಿಡುವುದಿಲ್ಲ: ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವ ವಿಚಾರ ಈ ಶೈಕ್ಷಣಿಕ ವರ್ಷದಲ್ಲಿ ಸಾಧ್ಯವಿಲ್ಲ ಎಂದರು.

ಈ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕಿದೆ. ಸಮಿತಿಯೊಂದನ್ನು ಇದಕ್ಕಾಗಿ ರಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಕ್ಕಳ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಶಿಕ್ಷಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಶಾಲೆಯಲ್ಲಿ ಮೊಬೈಲ್ ಫೋನ್ ಬಳಸದಂತೆ ಸೂಚನೆ ನೀಡಲಾಗಿದೆ ಎಂದರು.

ಇದು ಶಿಕ್ಷಕರ ಮನಸ್ಥಿತಿಯ ವಿಚಾರ. ದೊಡ್ಡವರ ಮನಸ್ಸಿನಲ್ಲಿರುವ ವಿಕೃತಿಯ ಪ್ರದರ್ಶನ. ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಉಂಟಾಗದಂತೆ ಎಚ್ಚರ ವಹಿಸುವುದು ಜವಾಬ್ದಾರಿಯಾಗಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.