ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ಸರೋದ್‌ ವಾದಕ ಪಂಡಿತ್ ರಾಜೀವ ತಾರಾನಾಥ್ ನಿಧನ

ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ ತಾರಾನಾಥ್ (93) ಅವರು ಇಲ್ಲಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು.
Published 11 ಜೂನ್ 2024, 14:07 IST
Last Updated 11 ಜೂನ್ 2024, 14:07 IST
ಅಕ್ಷರ ಗಾತ್ರ

ಮೈಸೂರು: ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ ತಾರಾನಾಥ್ (93) ಅವರು ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು.

ಕುವೆಂ‍ಪುನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಳ್ಳುತ್ತಿದ್ದರು.

‘ರಾತ್ರಿ 7.05ರ ವೇಳೆಗೆ ಮೃತಪಟ್ಟಿದ್ದು, ಕುವೆಂಪುನಗರದ ನಿವಾಸದಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಅವರ ಆಪ್ತ, ಲೇಖಕ ಟಿ.ಎಸ್‌.ವೇಣುಗೋಪಾಲ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT