ಮೈಸೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರ ಕುರಿತು ಆ ಪಕ್ಷದ ಒಬಿಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಆರ್. ರಘು (ಕೌಟಿಲ್ಯ) ಅವರ ನಿರೂಪಣೆ ಮತ್ತು ಪರಿಕಲ್ಪನೆಯಲ್ಲಿ ಮೂಡಿಬಂದಿರುವ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ.

ಯಡಿಯೂರಪ್ಪ ಅವರ ಬದುಕಿನ ಮೈಲುಗಲ್ಲುಗಳನ್ನು ಸಾರುವ ‘ಕೆಂದಾವರೆ- ಕಮಲ ಅರಳಿದ ಕಥೆ’ ಹಾಗೂ ಅವರ ಸುದೀರ್ಘ ಶಾಸಕತ್ವದ ಅವಧಿಯಲ್ಲಿ ಸದನದಲ್ಲಿ ಮಾಡಿದ ಭಾಷಣಗಳ ಸಂಗ್ರಹ ಒಳಗೊಂಡ ‘ಸದನ ಶಿಕಾರಿ-ಯಡಿಯೂರಪ್ಪನವರ ಗುಡುಗಿನ ನುಡಿಗಳು’ ಕೃತಿಗಳನ್ನು ಈಚೆಗೆ ಚಿತ್ರದುರ್ಗದಲ್ಲಿ ನಡೆದ ‘ಬಿಎಸ್ವೈ ಅಭಿಮಾನೋತ್ಸವ’ದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಡುಗಡೆ ಮಾಡಿದರು.

ರಂಭಾಪುರಿ ಶ್ರೀಗಳು, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಗೋವಿಂದ ಕಾರಜೋಳ, ಬಿ. ಶ್ರೀರಾಮುಲು, ಸಿ.ಟಿ. ರವಿ, ತಮ್ಮೇಶ್ ಗೌಡ, ಆರ್. ರಘು, ರೇವಯ್ಯ ಒಡೆಯರ್ ಪಾಲ್ಗೊಂಡಿದ್ದರು.

‘ಸದನ ಶಿಕಾರಿ…’ ಕೃತಿಯನ್ನು ರೇವಯ್ಯ ಒಡೆಯರ್ ಸಂಪಾದಿಸಿದ್ದಾರೆ. ‘ಈ ಕೃತಿಗಳು ಅವರ ಅಭಿಮಾನಿಗಳಿಗೆ, ಹಿತೈಷಿಗಳಿಗೆ ಮಾತ್ರವಲ್ಲ, ಸಾರ್ವಜನಿಕ ಕ್ಷೇತ್ರದ ಪ್ರತಿಯೊಬ್ಬರಿಗೂ, ಆಸಕ್ತಿಕರ ಮಾಹಿತಿಯುಕ್ತ, ಸಂಗ್ರಹ ಯೋಗ್ಯವಾಗಿವೆ. ಆಸಕ್ತರು ಓದಿ, ಪ್ರೇರಣೆ ಪಡೆದಲ್ಲಿ ಕೃತಿಗಳು ಸಾರ್ಥಕತೆ ಪಡೆಯುತ್ತವೆ’ ಎಂದು ಎಂದು ರಘು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-39-1646945832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.