ಮೈಸೂರು: ‘ರಾಜ್ಯದಲ್ಲಿ ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಪಶ್ಚಿಮ ಬಂಗಾಳ ಮಾದರಿಯ ಫಲಿತಾಂಶ ಎದುರಾಗಲಿದೆ ಎಂಬ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಭವಿಷ್ಯ ಸುಳ್ಳಾಗಲಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ರಾಜಕಾರಣದಲ್ಲಿ 50 ವಸಂತದ ಸಂಭ್ರಮದಲ್ಲಿರುವ ಅವರು, ಸುದೀರ್ಘ ಅನುಭವ ಹೊಂದಿದ್ದರೂ ಸುಳ್ಳು ವಿಶ್ಲೇಷಣೆ ಮುಂದಿಟ್ಟಿರುವುದು ಸಮಂಜಸವಲ್ಲ’ ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಯುದ್ಧ ಭೀತಿ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ಅಸಮ ರ್ಪಕ ವಿದೇಶಾಂಗ ನೀತಿಯ ಫಲವಾಗಿ ದೇಶಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಜನತೆಗೆ ನೀಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳು, ನೆರವಿನೊಂದಿಗೆ ಸಾಂತ್ವನವನ್ನೂ ನೀಡುತ್ತಿವೆ’ ಎಂದು ಹೇಳಿದ್ದಾರೆ.

‘ಕೇಂದ್ರ ಸರ್ಕಾರ ಜನರ ಬೆಲೆ ಏರಿಕೆ ಮೂಲಕ ಗಾಯದ ಮೇಲೆ ಬರೆ ಎಳೆಯುತ್ತಿದೆ. ಇಂತಹ ಜನವಿರೋಧಿ ಆಡಳಿತಗಾರರಿಗೆ ಮತದಾರ ಮನ್ನಣೆ ನೀಡುತ್ತಾನೆ ಎಂದು ಸಮರ್ಥಿಸಿಕೊಳ್ಳುವುದು ಹಿರಿಯ ರಾಜಕಾರಣಿಯಾದ ಯಡಿಯೂರಪ್ಪ ಅವರಿಗೆ ಶೋಭೆ ತರುವುದಿಲ್ಲ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-39-1559738403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.