ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಗೆ ಸುತ್ತಮುತ್ತಲಿನ 20ರಿಂದ 30 ಹಳ್ಳಿಗಳನ್ನು ಸೇರಿಸಿ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ (ಬಿಎಂಎಂಪಿ) ರಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಕುರಿತು ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿ ಬಳಿ ನಿಯೋಗ ಹೋಗಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

2018ರ ವಾರ್ಡ್ ಪುನರ್ವಿಂಗಡಣೆ ಆಧರಿಸಿ ಹಾಲಿ ಮೈಸೂರು ಮಹಾನಗರ ಪಾಲಿಕೆಯ ಗಡಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಂಡು ಪ್ರಸ್ತಾಪಿತ ಬಿಎಂಎಪಿ ಗಡಿ ಗುರುತಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆ ಪಡೆದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆಯ ಜನಸಂಖ್ಯೆ 13.30 ಲಕ್ಷದಷ್ಟಿದೆ. ಪಾಲಿಕೆಯ ಗಡಿಗೆ ಹೊಂದಿಕೊಂಡಿರುವ ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಂಡರೆ 16.80 ಲಕ್ಷ ಜನಸಂಖ್ಯೆ ಆಗಲಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಸಭೆಗೆ ಮಾಹಿತಿ ನೀಡಿದರು.

ಮೈಸೂರಿನಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳಿಗೆ ಕೊರತೆ ಇಲ್ಲ. ಮೈಸೂರು ಮಹಾನಗರ ಪಾಲಿಕೆಯ ಗಡಿಗೆ ಹೊಂದಿಕೊಂಡಿರುವ ಕೆಲವು ಪ್ರದೇಶಗಳಿಗೆ ಪಾಲಿಕೆ ವತಿಯಿಂದಲೇ ಕುಡಿಯುವ ನೀರು ಪೂರೈಸಲಾಗುತ್ತಿದೆ. ಈ ವ್ಯಾಪ್ತಿಯಲ್ಲಿ ಬಡಾವಣೆಗಳು ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಅಭಿವೃದ್ಧಿ ಆಗಿವೆ. ಅಲ್ಲಿನ ನಿವಾಸಿಗಳಿಗೆ ಮೂಲಸೌಕರ್ಯ ಒದಗಿಸಬೇಕೆಂಬ ಬೇಡಿಕೆಯೂ ಹೆಚ್ಚಿದೆ. ಹೀಗಾಗಿ ಪಾಲಿಕೆಯು ತನ್ನ ಸೇವೆಯನ್ನು ವಿಸ್ತರಿಸಬೇಕಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಕಡಕೋಳ ಮತ್ತು ಬೋಗಾದಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿಯ ಇಲವಾಲ ಗ್ರಾಮ, ಸಿದ್ಧಲಿಂಗಪುರ ಗ್ರಾಮ ಪಂಚಾಯಿತಿ, ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ನಾಗನಹಳ್ಳಿ ಗ್ರಾಮ ಪಂಚಾಯಿತಿಯ ಶ್ಯಾದನಹಳ್ಳಿ ಗ್ರಾಮ ಮೈಸೂರು ಮಹಾನಗರ ಪಾಲಿಕೆಯ ಗಡಿಗೆ ಹೊಂದಿಕೊಂಡಿದೆ. ಅವುಗಳಲ್ಲಿ ಕೆಲವು ಸ್ಥಳೀಯ ಸಂಸ್ಥೆಗಳ ಕೌನ್ಸಿಲ್ ಸಭೆಯಲ್ಲಿ ಬೃಹತ್ ಮೈಸೂರು ಮಹಾನಗರ ಪಾಲಿಕೆಗೆ ಸೇರಿಸುವ ಪ್ರಸ್ತಾವಕ್ಕೆ ಸರ್ವಾನುಮತದ ಒಪ್ಪಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಉಳಿದ ಸ್ಥಳೀಯ ಸಂಸ್ಥೆಗಳ ಕೌನ್ಸಿಲ್ ಸಭೆಗಳಲ್ಲಿಯೂ ಬಿಎಂಎಂಪಿ ರಚಿಸುವ ಪ್ರಸ್ತಾವ ಮಂಡಿಸಿ ಅನುಮೋದನೆ ಪಡೆದು ಆದಷ್ಟು ಬೇಗ ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ. ಶರತ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಆರ್. ಸೆಲ್ವಮಣಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತ ಆರ್. ವೆಂಕಟಾಚಲಪತಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತ ಶೇಖ್ ತನ್ವೀರ್ ಆಸಿಫ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಘುನಂದನ್, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕ ಎನ್.ಕೆ. ತಿಪ್ಪೇಸ್ವಾಮಿ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.