ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಿಯಲ್ ಎಸ್ಟೇಟ್ ಏಜೆಂಟ್’ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಖಂಡಿಸಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ಮುಖಂಡರು ಪುರಭವನದ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟಿಸಿದರು.

ಮೈಸೂರು ನಗರ ಕಾಂಗ್ರೆಸ್ ವಕ್ತಾರ ರಾಜೇಶ್ ಮಾತನಾಡಿ, ‘ಎಚ್.ಡಿ.ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತರಲು ಯತ್ನಿಸಿದ್ದರು. ರಾಮನಗರ ಭಾಗದಲ್ಲಿ 5 ಟೌನ್ಶಿಪ್ ಮಾಡಲು ಮುಂದಾಗಿದ್ದ ಇವರಿಗೆ, ರೈತರ ಜಮೀನು ಫಲವತ್ತಾಗಿದೆ ಎಂಬ ಅರಿವು ಇರಲಿಲ್ಲವೇ? ರೈತರಿಗೆ ಅನಾನುಕೂಲ ಆಗುತ್ತಿದೆ ಎಂಬ ಕಾಳಜಿ ಇರಲಿಲ್ಲವೇ? ಆಗ ಅವರು ರಿಯಲ್ ಎಸ್ಟೇಟ್ ಮಾಡಲು ಹೊರಟಿದ್ದರೇ’ ಎಂದು ಪ್ರಶ್ನಿಸಿದರು.

‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಈ ಯೋಜನೆಗೆ ₹ 18 ಸಾವಿರ ಕೋಟಿ ಮೀಸಲಿಟ್ಟಿದೆ. ಈ ಯೋಜನೆಯಿಂದ ಬೆಂಗಳೂರಿನ ವಾಹನ ಸಂಚಾರ ದಟ್ಟಣೆ ಹಾಗೂ ಮೂಲಸೌಕರ್ಯ, ರಾಮನಗರ ಗ್ರಾಮಾಂತರ ಭಾಗಕ್ಕೆ ರಸ್ತೆ, ಒಳಚರಂಡಿ, ಯುಜಿಡಿಯಾಗಲಿದ್ದು. ರೈತರಿಗೆ ಅನುಕೂಲಕರ ಯೋಜನೆಯಾಗಲಿದೆ. ಮೈಸೂರು- ಬಿಡದಿ ಹೆದ್ದಾರಿಯಲ್ಲಿ 7,400 ಎಕರೆ ಪ್ರದೇಶದಲ್ಲಿ ಟೌನ್ಶಿಪ್ ಮಾಡುತ್ತಿರುವುದರಿಂದ, ಮೈಸೂರು, ಮಂಡ್ಯ, ರಾಮನಗರ, ನಗರ ಪ್ರದೇಶಗಳ ಅಭಿವೃದ್ದಿಗೆ ಪೂರಕವಾಗಿದೆ. ಆದರೆ, ಕುಮಾರಸ್ವಾಮಿ ಅವರು ತಮ್ಮ ಹೇಳಿಕೆ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

ಮುಖಂಡರಾದ ರಾಜಶೇಖರ್, ಮಹೇಶ್, ಸುನಿಲ್, ನಾರಾಯಣ, ಸೈಯದ್ ಫಾರೂಕ್, ಪ್ರಕಾಶ್, ಧನಂಜಯ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-39-2077955597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.