ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮಾದರಿ ಎನಿಸಿದೆ. ಅವರು ಮೈಸೂರಿಗೆ ಅಪಾರ ಕೊಡುಗೆ ನೀಡಿದ್ದಾರೆ. ಇದನ್ನು ಸಹಿಸದ ಬಿಜೆಪಿ ಮುಖಂಡರು ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ನಗರ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್. ರಾಜೇಶ್ ಕಿಡಿಕಾರಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಗರದ ಬನ್ನಿಮಂಟಪದಲ್ಲಿ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ ನಿರ್ಮಾಣಕ್ಕೆ ₹450 ಕೋಟಿ, ಚಾಮರಾಜಕ್ಷೇತ್ರದ ಅಭಿವೃದ್ಧಿಗೆ ಸುಮಾರು ₹ 950 ಕೋಟಿ, ಎನ್.ಆರ್. ಕ್ಷೇತ್ರದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣ ಮುಂತಾದ ಸಾಧನೆಗಳಾಗಿವೆ. ಆದರೆ ಬಿಜೆಪಿ ಅವಧಿಯಲ್ಲಿ ಕೇವಲ ಭ್ರಷ್ಟಾಚಾರಗಳೇ ನಡೆದವು. ಅವರ ಪಕ್ಷದ ಸಮಸ್ಯೆಯನ್ನು ಸರಿಪಡಿಸಿದ ಬಳಿಕ ನಮ್ಮ ಮುಖಂಡರನ್ನು ಟೀಕಿಸಿ’ ಎಂದರು.

ಪದಾಧಿಕಾರಿಗಳಾದ ಸೈಯದ್ ಫಾರೂಕ್, ಬಿ.ಜ. ಕೇಶವ, ರಾಮು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-39-81615037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.