ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮೀಣರು, ಆದಿವಾಸಿಗಳಿಗೆ ದಸರಾ ದರ್ಶನ

ಕೆಎಸ್‌ಆರ್‌ಟಿಸಿ ಬಸ್ಸುಗಳ ವ್ಯವಸ್ಥೆ; ಉಚಿತ ವೀಕ್ಷಣೆಗೆ ಅವಕಾಶ
Published : 3 ಅಕ್ಟೋಬರ್ 2019, 13:09 IST
ಫಾಲೋ ಮಾಡಿ
Comments

ಮೈಸೂರು: ದಸರಾ ಮಹೋತ್ಸವ ಅಂಗವಾಗಿ ನಾಡಹಬ್ಬ ಕಣ್ತುಂಬಿಕೊಳ್ಳಲು ಆದಿವಾಸಿಗಳು ಹಾಗೂ ಗ್ರಾಮೀಣ ಪ್ರದೇಶದ ಜನರಿಗೂ ಅವಕಾಶ ಸಿಕ್ಕಿದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳು 31 ತಾಲ್ಲೂಕುಗಳಿಂದ 11,150 ಮಂದಿಗೆ ದಸರಾ ದರ್ಶನ ಭಾಗ್ಯ ಕಲ್ಪಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಕೋಟೆ ಆಂಜನೇಯ ಸ್ವಾಮಿ ದೇಗುಲದ ಮುಂಭಾಗ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು.

ಮೈಸೂರು ಜಿಲ್ಲೆಯ ಪ್ರತಿ ತಾಲ್ಲೂಕಿಗೆ 9 ಬಸ್ಸು ಹಾಗೂ ಇತರ ಜಿಲ್ಲೆಗಳ ಪ್ರತಿ ತಾಲ್ಲೂಕಿಗೆ 6 ಬಸ್ಸುಗಳನ್ನು ನಿಯೋಜಿಸಲಾಗಿದೆ. ಅರಮನೆ, ಮೃಗಾಲಯ, ರೈತ ದಸರಾ ಹಾಗೂ ಚಾಮುಂಡಿಬೆಟ್ಟ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಬೆಳಿಗ್ಗೆ 6.30ಕ್ಕೆ ಶುರುವಾಗಿ ಸಂಜೆ 7 ಗಂಟೆಗೆ ಕೊನೆಗೊಳ್ಳಲಿದೆ.

ಕಳೆದ ಬಾರಿ ರಿಯಾಯಿತಿ ದರದ ಬಸ್‌ ಪಾಸ್‌ ಮೊತ್ತವಾಗಿ ₹ 50 ಪಡೆಯಲಾಗುತಿತ್ತು. ಆದರೆ, ಈ ಬಾರಿ ಸಚಿವರ ಸೂಚನೆಯಂತೆ ಉಚಿತ ವ್ಯವಸ್ಥೆ ಮಾಡಲಾಗಿದೆ.

ಮೇಯರ್‌ ಪುಷ್ಪಲತಾ ಜಗನ್ನಾಥ್‌, ಜಿಲ್ಲಾಧಿಕಾರಿ ಅಭಿರಾಂ ಡಿ.ಶಂಕರ್‌, ದಸರಾ ದರ್ಶನ ಉಪಸಮಿತಿ ಕಾರ್ಯಾಧ್ಯಕ್ಷ ಆರ್‌.ಅಶೋಕ್‌ ಕುಮಾರ್‌ ಇದ್ದರು.

ಅಂಕಿ ಅಂಶ
* 11,150; ಜನರಿಗೆ ದಸರಾ ದರ್ಶನ
* 5; ಜಿಲ್ಲೆಗಳ ಜನರಿಗೆ ಅವಕಾಶ
* 70; ಕೆಎಸ್‌ಆರ್‌ಟಿಸಿ ಬಸ್ಸುಗಳು
* 55; ಜನರು ಪ್ರತಿ ಬಸ್ಸಿನಲ್ಲಿ ಪ್ರಯಾಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT