ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರೆಗೆ ‘ಗಜಪಯಣ’ ಮುನ್ನುಡಿ

ವೀರನಹೊಸಹಳ್ಳಿಯಿಂದ ಅರಮನೆಗಳ ನಗರ ತಲುಪಿದ ಆನೆಗಳು
Last Updated 7 ಆಗಸ್ಟ್ 2022, 21:45 IST
ಅಕ್ಷರ ಗಾತ್ರ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಭಾನುವಾರ ದಸರೆಯ ಸಂಭ್ರಮಕ್ಕೆ ‘ಗಜ ಪಯಣ’ವು ಮುನ್ನುಡಿ ಬರೆಯಿತು.

ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು ಸೇರಿ 9 ಆನೆಗಳಿಗೆ ಸಚಿವರಾದ ಎಸ್.ಟಿ.ಸೋಮಶೇಖರ್, ಉಮೇಶ್ ಕತ್ತಿ ತುಂತುರು ಮಳೆಯಲ್ಲೇ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಪುಷ್ಪಾರ್ಚನೆ ಮಾಡಿ ಗಜ ಪಯಣಕ್ಕೆ ಚಾಲನೆ ನೀಡಿದರು.

ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು, ಭೀಮ, ಮಹೇಂದ್ರ, ಗೋಪಾಲಸ್ವಾಮಿ, ಬಳ್ಳೆ ಶಿಬಿರದ ಅರ್ಜುನ, ದುಬಾರೆ ಶಿಬಿರದ ಧನಂ ಜಯ, ಕಾವೇರಿ, ರಾಮಪುರ ಆನೆ ಶಿಬಿರದ ಚೈತ್ರಾ, ಲಕ್ಷ್ಮಿ ಆನೆಗಳನ್ನು ಬಣ್ಣ ಮತ್ತು ಹೂಗಳಿಂದ ಅಲಂಕರಿ
ಸಲಾಗಿತ್ತು.

ಅರಮನೆ ಪುರೋಹಿತ ಪ್ರಹ್ಲಾದ್‌ ರಾವ್ ನೇತೃತ್ವದಲ್ಲಿ ಪೂಜಾ ಕಾರ್ಯ ಕ್ರಮ ನಡೆಯಿತು. ಆನೆಗಳಿಗೆ ಪಂಚಫಲ, ಕಡುಬು, ಚಕ್ಕುಲಿ, ನಿಪ್ಪಟ್ಟು, ಹೋಳಿಗೆ, ಬೆಲ್ಲ, ಕಬ್ಬು, ಕಲ್ಲು ಸಕ್ಕರೆ, ಮೋದಕ ನೈವೇದ್ಯ ನೀಡಿ ‘ಶೋಡಷೋಪಚಾರ’ ಪೂಜೆ ಮಾಡಲಾಯಿತು. ಗಣಪತಿ ಅರ್ಚನೆ ಜೊತೆ ವನದೇವತೆ, ಚಾಮುಂ ಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಪೂಜೆ ನಂತರ ಕೆಲವು ದೂರದವರೆಗೆ ಆನೆಗಳನ್ನು ನಡೆಸಿಕೊಂಡು ಬರಲಾ ಯಿತು. ಬಳಿಕ ಲಾರಿಗಳಲ್ಲಿ ಮೈಸೂರಿನ ಅರಣ್ಯ ಭವನಕ್ಕೆ ಸಾಗಿಸಲಾಯಿತು.

ಈ ಆನೆಗಳು ಆ.10ರಂದು ಅರಮನೆಗೆ ಆಗಮಿಸಲಿವೆ. ಸೆ.26ರಿಂದ ನವರಾತ್ರಿ ಆರಂಭವಾಗಲಿದೆ. ಅ.5ರ ವಿಜಯದಶಮಿಯಂದು ಜಂಬೂ ಸವಾರಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT