ಮೈಸೂರು: 2–3 ವರ್ಷದಿಂದ ಜೆಡಿಎಸ್ ಚಟುವಟಿಕೆಗಳಿಂದ ದೂರವೇ ಉಳಿದಿರುವ ಶಾಸಕ ಜಿ.ಟಿ. ದೇವೇಗೌಡ ಅವರು ಶುಕ್ರವಾರ ಬೆಂಗಳೂರಿನಲ್ಲಿ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿರು ವುದು ಕುತೂಹಲ ಮೂಡಿಸಿದೆ.

ಮೇ 18ರಂದು ದೇವೇಗೌಡರ ಜನ್ಮದಿನವಿದ್ದು, ಅದಕ್ಕೂ ಮೂರು ದಿನ ಮುನ್ನವೇ ಅವರ ನಿವಾಸಕ್ಕೆ ಭೇಟಿ ನೀಡಿದ ಜಿಟಿಡಿ, ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಂದಿದ್ದ ಪ್ರಸಾದವನ್ನು ನೀಡಿದರು.

ಜಿ.ಟಿ. ದೇವೇಗೌಡರು ಪ್ರತಿನಿಧಿಸುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ (ಮೇ 17) ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದ ಸಮಾರೋಪವಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಈ ಕ್ಷೇತ್ರದಲ್ಲಿ ಜೆಡಿಎಸ್ಗೆ ಪರ್ಯಾಯ ಅಭ್ಯರ್ಥಿ ಹುಡುಕುತ್ತಿರುವುದಾಗಿ ಪಕ್ಷದ ಮುಖಂಡರು ಬಹಿರಂಗ ಹೇಳಿಕೆ ನೀಡಿದ್ದಾರೆ. ಈ ನಡುವೆಯೇ ಜಿಟಿಡಿ, ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೇಗೌಡ, ‘ನನ್ನ ಪಕ್ಷ ನಿಷ್ಠೆ, ಪ್ರಾಮಾಣಿಕತೆ ಏನೆಂದು ಹಿರಿಯರಾದ ದೇವೇಗೌಡರಿಗೆ ಗೊತ್ತಿದೆ. ಪಕ್ಷದ ಸಂಘಟನೆಗೆ ನನ್ನನ್ನು ಆಹ್ವಾನಿಸಿಲ್ಲ. ಮುಂದೆ ಆಹ್ವಾನಿಸುವ ಸಂದರ್ಭ ಬಂದಾಗ ಆ ಬಗ್ಗೆ ನಿರ್ಧರಿಸುತ್ತೇನೆ’ ಎಂದರು. ‘ಭೇಟಿ ವೇಳೆ ನಾನಾಗಲಿ ಮತ್ತು ದೇವೇಗೌಡರಾಗಲಿ ಒಂದು ಅಕ್ಷರ ರಾಜಕೀಯ ಮಾತನಾಡಿಲ್ಲ’ ಎಂದರು.

‘ಕುಮಾರಸ್ವಾಮಿ ಹಾಗೂ ನಿಖಿಲ್ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈ ತನಕ ನನ್ನನ್ನು ಭಾಗವಹಿಸುವಂತೆ ಹೇಳಿಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-39-211305037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.