ಮೈಸೂರು: ‘ಪಕ್ಷ ಸಂಘಟನೆಯ ಕಾರಣಕ್ಕೆ ಎಚ್.ಡಿ. ಕುಮಾರಸ್ವಾಮಿ ಆಹ್ವಾನದ ಮೇರೆಗೆ ಜೆಡಿಎಸ್ಗೆ ಮರಳಿದ್ದೇನೆ’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಾದೇಗೌಡ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನನ್ನ ಜೆಡಿಎಸ್ ಸೇರ್ಪಡೆಗೆ ನಮ್ಮ ಅಭಿಪ್ರಾಯ ಕೇಳಿಲ್ಲ, ಮುಖಂಡರ ಒಪ್ಪಿಗೆ ಪಡೆದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಅವರ ಮಾತಿಗೆ ಮನ್ನಣೆ ನೀಡುವ ಅಗತ್ಯವಿಲ್ಲ. ಮನೆಯ ಯಜಮಾನರೇ (ಕುಮಾರಸ್ವಾಮಿ) ಒಪ್ಪಿಗೆ ನೀಡಿದ ಮೇಲೆ ಬೇರೆಯವರೊಂದಿಗೆ ಚರ್ಚಿಸುವ ಅಗತ್ಯವಿಲ್ಲ’ ಎಂದು ತಿರುಗೇಟು ನೀಡಿದರು.

‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ, ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೆ. ಕೊನೆಯ ದಿನಗಳಲ್ಲಿ ನಡೆದ ಕೆಲವು ಬೆಳವಣಿಗೆಗಳಿಂದ ಬೇಸತ್ತು ಜೆಡಿಎಸ್ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದೆ. ಆದರೆ ಕಾಂಗ್ರೆಸ್ ನಮಗೆ ಒಗ್ಗಲಿಲ್ಲ. ಇದೇ ವೇಳೆ ಕುಮಾರಸ್ವಾಮಿಯವರು ಪಕ್ಷಕ್ಕೆ ಬರುವಂತೆ ಸೂಚಿಸಿದರು. ಸಾ.ರಾ. ಮಹೇಶ್ ಕೂಡ ಹಳೆಯದನ್ನು ಮರೆತು, ಪಕ್ಷ ಸೇರಲು ಹೇಳಿದ್ದರಿಂದ ವಾಪಸ್ ಬಂದಿದ್ದೇನೆ" ಎಂದರು.

‘ಶಾಸಕ ಜಿ.ಡಿ. ಹರೀಶ್ ಗೌಡ ಅವರನ್ನು ಇಂದಿನ ಸಭೆಗೆ ಬರುವಂತೆ ಹೇಳಿದ್ದೆ. ಶನಿವಾರ ಕೂಡ ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿದ್ದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ’ ಎಂದು ಹೇಳಿದರು.

‘ಶಾಸಕ ಜಿ.ಟಿ. ದೇವೇಗೌಡರ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಮಾಡಲಿದೆ. ಈಗಲೂ ಅವರೇ ನಮ್ಮ ಗುರುಗಳು. ಒಂದು ವೇಳೆ ವರಿಷ್ಠರು ಅವರಿಗೆ ಟಿಕೆಟ್ ನೀಡಿದರೆ ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ’ ಎಂದರು.

ಪಾಲಿಕೆ ಮಾಜಿ ಸದಸ್ಯ ಕೆಂಪಣ್ಣ ಹಾಗೂ ಮುಖಂಡ ರಾಮು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-39-329714147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.